ಉಡುಪಿ: ಚಾಕುವಿನಿಂದ ಇರಿದು ಒಂದೇ ಕುಟುಂಬದ ನಾಲ್ವರನ್ನು ಬರ್ಬರವಾಗಿ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಡಚಿಯಲ್ಲಿ ಕೊಲೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಪ್ರವೀಣ್ ಅರುಣ್ ಚೌಗಲೆ ಬಂಧಿತ ಆರೋಪಿ. ಈತ ಪೊಲೀಸರಿಂದ ಕಳೆದ ಎರಡು ದಿನಗಳಿಂದ ಪೊಲೀಸರ ಕಣ್ತಪ್ಪಿಸಿ ಓಡಾಡುತ್ತಿದ್ದನು. ಇಂದು ಮಧ್ಯಾಹ್ನ ಬೆಳಗಾವಿ ಮಾರ್ಗವಾಗಿ ಮಹಾರಾಷ್ಟ್ರ ಇಲ್ಲವೇ ಆಂಧ್ರಕ್ಕೆ ತೆರಳಲು ಹಂತಕ ಪ್ಲ್ಯಾನ್ ಮಾಡಿಕೊಂಡಿದ್ದನು. ಪೊಲೀಸರು ಆತನ ಟೆಕ್ನಿಕಲ್ ಎವಿಡನ್ಸ್ ಆಧರಿಸಿ ಖೆಡ್ಡಾಕ್ಕೆ ಕೆಡವಿದ್ದಾರೆ. ಕೊಲೆ ಮಾಡಿ ಊರೂರು ಮೇಲೆ ಸಿಕ್ಕಿಬಿದ್ದ ಆರೋಪಿಯನ್ನು ಬಂಧಿಸಿ ಉಡುಪಿಗೆ ಕರೆತರಲಾಗುತ್ತಿದೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ