ಕರ್ನಾಟಕ ರಾಜ್ಯದಲ್ಲಿ ಅಭಿವೃದ್ಧಿ ಕುಂಠಿತಗೊಂಡಿದೆ, ಕಾಂಗ್ರೆಸ್ ಸರ್ಕಾರವು ರಾಜ್ಯವನ್ನು ಹಾಳುಗೆಡವಿದ್ದು, ಅಧಿಕಾರದ ಚುಕ್ಕಾಣಿ ಹಿಡಿದಿರುವ ಮುಖ್ಯಮಂತ್ರಿಗಳು ಎಷ್ಟು ದಿನಗಳವರೆಗೆ ಆ ಹುದ್ದೆಯಲ್ಲಿ ಮುಂದುವರಿಯಲಿದ್ದಾರೆ ಎಂಬ ಬಗ್ಗೆ ಅನುಮಾನ ಹುಟ್ಟುಹಾಕಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಹೇಳಿದರು.
ಮಧ್ಯಪ್ರದೇಶದ ಖಾಂಡ್ವಾದಲ್ಲಿ ಸಾರ್ವಜನಿಕ ಸಭೆ ಉದ್ದೇಶಿಸಿ ಮಾತನಾಡಿದ ಅವರು, ಕಾಂಗ್ರೆಸ್ ಭ್ರಷ್ಟಾಚಾರದಲ್ಲಿ ತೊಡಗಿದೆ. ಅವರು ಎಲ್ಲಿ ಸರ್ಕಾರ ರಚಿಸಿದ್ದಾರೋ ಆ ರಾಜ್ಯಗಳ ಅಭಿವೃದ್ಧಿ ಕುಂಠಿತಗೊಂಡಿದೆ. ನಾಯಕರು ಪರಸ್ಪರ ಆಂತರಿಕ ಕಚ್ಚಾಟದಲ್ಲಿ ತೊಡಗಿದ್ದು, ಸಾರ್ವಜನಿಕರ ಸಮಸ್ಯೆಯನ್ನು ಬಗೆಹರಿಸುವಲ್ಲಿ ವಿಫಲರಾಗಿದ್ದಾರೆ. ಕರ್ನಾಟಕದಲ್ಲಿ ಕಳೆದ ಆರು ತಿಂಗಳ ಹಿಂದೆಯಷ್ಟೇ ರಚನೆಯಾದ ಕಾಂಗ್ರೆಸ್ ಸರ್ಕಾರವನ್ನು ನೋಡಿ, ಸಿಎಂ ಎಷ್ಟು ದಿನ ರಾಜ್ಯಭಾರ ಮಾಡುತ್ತಾರೋ ಗೊತ್ತಿಲ್ಲ. ಅಭಿವೃದ್ಧಿ ಕಾರ್ಯಗಳು ಸ್ಥಗಿತಗೊಂಡಿದ್ದು, ಇಡೀ ರಾಜ್ಯವನ್ನೇ ಹಾಳು ಮಾಡಿದ್ದಾರೆ. ಇದು ಕಾಂಗ್ರೆಸ್‌ನ ಸಂಸ್ಕೃತಿ ಎಂದರು.
ದೆಹಲಿಯಲ್ಲಿ ಕುಳಿತುಕೊಳ್ಳುವ ಅವರ ನ್ಯಾಯಾಧೀಶರು ತೀರ್ಪು ನೀಡುತ್ತಾರೆ, ಅದರಂತೆ ಸರ್ಕಾರ ನಡೆಸುತ್ತಾರೆ. ಯಾವ ಯಾವ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ತಪ್ಪಾಗಿ ರಚನೆಯಾಗಿದೆಯೋ ಅಲ್ಲಿನ ಮುಖ್ಯಮಂತ್ರಿ ಮತ್ತು ಅವರ ಉಪನಾಯಕರ ನಡುವೆ ರಾಜ್ಯವನ್ನು ಲೂಟಿ ಮಾಡುವ ಪೈಪೋಟಿ ನಡೆಯುತ್ತಿದೆ. ಕರ್ನಾಟಕದಿಂದ ಇಂತಹ ಸುದ್ದಿಗಳು ನಿಯಮಿತವಾಗಿ ಕೇಳಿ ಬರುತ್ತಿವೆ ಎಂದು ಹೇಳಿದರು.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ