ಉಡುಪಿಯ ಪೇಜಾವರ ಮಠದ ಶ್ರೀ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿಯವರ ತಂದೆ ಅಂಗಡಿಮಾರ್ ಕೃಷ್ಣ ಭಟ್ (102) ನಿಧನರಾಗಿದ್ದಾರೆ.
ಹಳೆಯಂಗಡಿ ಸಮೀಪದ ಪಕ್ಷಿಕೆರೆಯಲ್ಲಿರುವ ಸ್ವಗೃಹದಲ್ಲಿ ಮತ್ತೋರ್ವ ಪುತ್ರನೊಂದಿಗೆ ವಾಸವಿದ್ದ ಅವರು, ತುಳು ಲಿಪಿಕಾರರಾಗಿ, ಪಂಚಾಂಗ ಕರ್ತರಾಗಿ, ಭಜನೆ ರಚನಕಾರರಾಗಿದ್ದರು.
ಸಾಹಿತ್ಯ ಲೋಕಕ್ಕೆ ನೀಡಿದ ಕೊಡುಗೆಗಾಗಿ ಇವರಿಗೆ ಕೃಷ್ಣಾನುಗ್ರಹ ಪ್ರಶಸ್ತಿ, ಕಲ್ಕೂರ ಪ್ರತಿಷ್ಠಾನದಿಂದ ನೀಡಲಾದ ಪೇಜಾವರ ಶ್ರೀ ಜೀವಮಾನ ಪ್ರಶಸ್ತಿ, ಬ್ರಾಹ್ಮಣರ ಸಮ್ಮೇಳನದ ಗೌರವ ಪುರಸ್ಕಾರ ಸಹಿತ ಅನೇಕ ಗೌರ ಪ್ರಶಸ್ತಿಗಳು ಲಭಿಸಿದೆ.
ದಶಕಗಳ ಹಿಂದೆ ಪತ್ನಿ ಯಮುನಾ ಭಟ್ ಅವರನ್ನು ಕಳೆದುಕೊಂಡಿದ್ದ ಇವರು, ತನ್ನ ಎಂಟನೇ ಪುತ್ರ ಪೇಜಾವರ ಶ್ರೀ ವಿಶ್ವ ಪ್ರಸನ್ನ ತೀರ್ಥರ ಸಹಿತ ಐದು ಮಂದಿ ಪುತ್ರರು ಹಾಗೂ ಏಳು ಮಂದಿ ಪುತ್ರಿಯರು ಸಹಿತ ಅಪಾರ ಅಭಿಮಾನಿ ಬಳಗವನ್ನು ಅಗಲಿದ್ದಾರೆ.
ಇಂದು ಮಧ್ಯಾಹ್ನ 12 ಕ್ಕೆ ಪಕ್ಷಿಕೆರೆಯ ಸ್ವಗೃಹದಲ್ಲಿ ಅಂತ್ಯಕ್ರಿಯೆ ಜರಗಲಿದೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ