ಉಡುಪಿ: ಉಡುಪಿ ಜಿಲ್ಲೆಯ ಸಮುದ್ರ ತೀರದಲ್ಲಿ ನಿಲ್ಲಿಸಿದ್ದ ಬೋಟುಗಳಿಗೆ ಬೆಂಕಿ ಬಿದ್ದು ಕೋಟ್ಯಂತರ ರೂ. ನಷ್ಟ ಸಂಭವಿಸಿದೆ.
ದೀಪಾವಳಿ ದಿನವಾದ ಸೋಮವಾರ ಉಡುಪಿ ಜಿಲ್ಲೆ ಬೈಂದೂರು ತಾಲ್ಲೂಕಿನ ಗಂಗೊಳ್ಳಿಯಲ್ಲಿ ದುರಂತ ಸಂಭವಿಸಿದ್ದು. ನಾಲ್ಕು ಗಂಟೆ ನಂತರವೂ ಬೆಂಕಿ ಆರಿಸುವ ಕೆಲಸ ನಡೆದಿದೆ. ಸಮುದ್ರ ತೀರದಲ್ಲಿ ನಿಲ್ಲಿಸಲಾಗಿದ್ದ ಬೋಟುಗಳಿವು. ಆಕಸ್ಮಿಕವಾಗಿ ಸಂಭವಿಸಿದ ಬೆಂಕಿ ಅನಾಹುತಕ್ಕೆ ಅಂದಾಜು 5 ಕೋಟಿಗೂ ಅಧಿಕ ನಷ್ಟ ಸಂಭವಿಸಿದೆ. ಈ ಘಟನೆಯಲ್ಲಿ 8 ಬೋಟ್, 2 ಬೈಕ್ ಅಲ್ಲದೆ, ಲಕ್ಷಾಂತರ ರೂಪಾಯಿ ಮೌಲ್ಯದ ಬಲೆ ಬೆಂಕಿಗೆ ಆಹುತಿಯಾಗಿದೆ.
ವಿಷಯ ತಿಳಿದು ಸ್ಥಳೀಯ ಪೊಲೀಸರು ಘಟನೆ ನಡೆದ ಸ್ಥಳಕ್ಕೆ ಧಾವಿಸಿದರು. ಅಗ್ನಿ ಶಾಮಕ ಘಟಕದ ವಾಹನಗಳೂ ಆಗಮಿಸಿ ಬೆಂಕಿ ನಂದಿಸುವಲ್ಲಿ ನಿರತವಾಗಿದ್ದವು. ಬೆಂಕಿಯನ್ನು ನಂದಿಸಲು ಹರಸಾಹಸ ಪಡುತ್ತಲೇ ಇದ್ದರು. ಎರಡು ಅಗ್ನಿಶಾಮಕ ದಳ ವಾಹನ ಸಹಕಾರದಿಂದ ಕಾರ್ಯಾಚರಣೆ ನಡೆಯಿತು. ಸ್ಥಳೀಯರಿಂದಲೂ ಗಾಡಿಯಲ್ಲಿ ನೀರು ಪೂರೈಸಿ ಬೆಂಕಿ ನಂದಿಸುವ ಕಾರ್ಯ ನಡೆಯುತ್ತಿದೆ.
ಗಾಳಿ ರಭಸಕ್ಕೆ ಗಗನಕ್ಕೆ ಬೆಂಕಿ ಚಿಮ್ಮುತ್ತಿರುವ ದೃಶ್ಯಗಳು ಕಂಡುಬಂತು. ದೀಪಾವಳಿಯ ಸಂದರ್ಭ ಪೂಜೆ ನಡೆಯುತ್ತಿದ್ದ ವೇಳೆ ಪಟಾಕಿ ಸಿಡಿತದಿಂದ ಈ ಅನಾಹುತ ಸಂಭವಿಸಿರಬಹುದು ಎಂದು ಅಂದಾಜಿಸಲಾಗಿದೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ