Slider

ಬೆಂಗಳೂರಿನಲ್ಲಿ ಸರ್ಕಾರಿ ಮಹಿಳಾ ಅಧಿಕಾರಿ ಭೀಕರ ಹತ್ಯೆ

 


ಬೆಂಗಳೂರು : ಚಾಕು ಇರಿದು ಉಪ ನಿರ್ದೇಶಕಿಯನ್ನು ಬರ್ಬರ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ಸುಬ್ರಹ್ಮಣ್ಯಪುರದಲ್ಲಿ ನಡೆದಿದೆ.

ಗಣಿ ಭೂ ವಿಜ್ಞಾನ ಇಲಾಖೆಯ ಉಪ ನಿರ್ದೇಶಕಿಯಾಗಿದ್ದ ಪ್ರತಿಮಾ ಮೃತ ಸರ್ಕಾರಿ ಅಧಿಕಾರಿ. ತೀರ್ಥಹಳ್ಳಿ ಮೂಲದ ಪ್ರತಿಮಾ ಸುಬ್ರಹ್ಮಣ್ಯಪುರದ ದೊಡ್ಡಕಲ್ಲಸಂದ್ರ ಬಳಿಯ ಕುವೆಂಪು ನಗರದ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು.

ಶನಿವಾರ ರಾತ್ರಿ ಪ್ರತಿಮಾ ಅವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಭಾನುವಾರ ಬೆಳಗ್ಗೆ ಪ್ರತಿಮಾ ಅವರ ಸಹೋದರ ಕರೆ ಮಾಡಿದ್ದಾರೆ. ಕರೆ ಸ್ವೀಕರಿಸದ ಹಿನ್ನೆಲೆಯಲ್ಲಿ ಮನೆ ಬಳಿ ತೆರಳಿದಾಗ ಕೊಲೆಯಾದ ವಿಚಾರ ಬೆಳಕಿಗೆ ಬಂದಿದೆ.

ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಶನಿವಾರ ರಾತ್ರಿ 8 ಗಂಟೆಗೆ ಪ್ರತಿಮಾ ಅವರನ್ನು ಕಾರು ಚಾಲಕ ನಿವಾಸಕ್ಕೆ ತಂದು ಬಿಟ್ಟಿದ್ದಾನೆ. ಪ್ರತಿಮಾ ಬೆಂಗಳೂರಿನಲ್ಲಿ ಒಬ್ಬರೇ ವಾಸವಾಗಿದ್ದು, ಪತಿ ಮತ್ತು ಮಗ ತೀರ್ಥಹಳ್ಳಿಯಲ್ಲಿ ವಾಸವಾಗಿದ್ದಾರೆ. ಪ್ರತಿಮಾ ಅವರ ಜೊತೆ ಮನೆಯಲ್ಲಿ ನಿನ್ನೆ ಯಾರಿದ್ದರು? ಯಾವ ಕಾರಣಕ್ಕೆ ಹತ್ಯೆ ನಡೆದಿದೆ ಈ ವಿಚಾರಗಳು ಇನ್ನಷ್ಟೇ ತಿಳಿಯಬೇಕಿದೆ.







0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo