Slider

ಉಡುಪಿ : ಹಿರಿಯ ಪತ್ರಕರ್ತ ಶಶಿಧರ್ ಹೆಮ್ಮಣ್ಣ ಹೃದಯಾಘಾತದಿಂದ ನಿಧನ

 


ಉಡುಪಿ ಜಿಲ್ಲೆಯ ಹಿರಿಯ ಪತ್ರಕರ್ತ ಶಶಿಧರ್ ಹೆಮ್ಮಣ್ಣ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 57 ವರ್ಷ ವಯಸ್ಸಾಗಿತ್ತು.

ನಿನ್ನೆ ಬೆಳಿಗ್ಗೆ ಉಡುಪಿಯ ಮನೆಯಲ್ಲಿದ್ದಾಗ ಧಿಢೀರಾಗಿ ಎದೆನೋವು ಕಾಣಿಸಿಕೊಂಡಿದ್ದು ಕೂಡಲೇ ಅವರನ್ನು ನಗರದ ಅಸ್ಪತ್ರೆಗೆ ತೋರಿಸಿದಾಗ ಹೃದಯಾಘಾತ ಅಗಿರುವುದು ದೃಢಪಟ್ಟಿತ್ತು.

ಈ ಹಿನ್ನಲೆ ಹಿನ್ನಲೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಅಸ್ಪತ್ರೆಗೆ ಕರೆದೊಯ್ಯಲಾಗಿತ್ತು, ಅಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಹೆಮ್ಮಣ್ಣರವರು ರಾತ್ರಿ ಹೊತ್ತಿಗೆ ಚಿಕಿತ್ಸೆ ಫಲಕಾರಿಯಾಗದೇ ಇಹಲೋಕ ತ್ಯಜಿಸಿದರು.

1991 ರಲ್ಲಿ ಕುಂದಪ್ರಭ ಪತ್ರಿಕೆಯ ಮೂಲಕ ವೃತ್ತಿ ಜೀವನ ಅರಂಭಿಸಿದ ಶಶಿಧರ್ - "ಕ್ಷಿತಿಜ" ಎನ್ನುವ ಸ್ವಂತ ವಾರ ಪತ್ರಿಕೆ ಅರಂಭಿಸಿ , ಮುಖ್ಯ ಸಂಪಾದಕರಾಗಿದ್ದರು.ಬಳಿಕ ಈ ಟಿವಿ ಕನ್ನಡ ,ಡಿಡಿ ನ್ಯೂಸ್ ನಲ್ಲಿ ಜಿಲ್ಲಾ ವರದಿಗಾರರಾಗಿ ಸೇವೆ ಸಲ್ಲಿಸಿದ್ದರು.









.

0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo