ಪಾಕಿಸ್ತಾನದಲ್ಲಿ ಇತ್ತೀಚೆಗೆ 'ಅಪರಿಚಿತರ' ಗುಂಡಿನ ದಾಳಿಗೆ ಹತ್ಯೆಗೀಡಾಗುತ್ತಿರುವ ಉಗ್ರರ ಸಂಖ್ಯೆ ದಿನೇದಿನೆ ಹೆಚ್ಚಾಗುತ್ತಿದೆ. ಪಾಕಿಸ್ತಾನದ ಖೈಬರ್ ಪಖ್ತುಂಖ್ವಾದಲ್ಲಿ ಲಷ್ಕರೆ ತಯ್ಬಾ ಕಮಾಂಡರ್ ಅಕ್ರಮ್ ಘಾಜಿಯನ್ನು ಗುಂಡಿಕ್ಕಿ ಹತ್ಯೆ ಮಾಡಲಾದ ಬೆನ್ನಲ್ಲೇ ಜೈಶೆ ಮೊಹಮ್ಮದ್ ಉಗ್ರ ಸಂಘಟನೆಯ ಮತ್ತೊಬ್ಬ ಉಗ್ರನು ಅಪರಿಚಿತರ ಗುಂಡಿನ ದಾಳಿಗೆ ಬಲಿಯಾಗಿದ್ದಾನೆ.
ಜೈಶೆ ಮೊಹಮ್ಮದ್ ಉಗ್ರ, ಉಗ್ರ ಸಂಘಟನೆಯ ಸಂಸ್ಥಾಪಕ ಮೌಲಾನ ಮಸೂದ್ ಅಜರ್‌ನ ಆಪ್ತನಾಗಿದ್ದ ಮೌಲಾನಾ ರಹೀಮ್ ಉಲ್ಲಾ ತಾರಿಕ್‌ನನ್ನು ಕರಾಚಿಯ ಒರಾಂಗಿ ಪಟ್ಟಣದಲ್ಲಿ ಹತ್ಯೆ ಮಾಡಲಾಗಿದೆ. ಬೈಕ್‌ನಲ್ಲಿ ಬಂದ ಅಪರಿಚಿತ ಬಂದೂಕುಧಾರಿಗಳು ಗುಂಡಿನ ದಾಳಿ ನಡೆಸಿ ಪರಾರಿಯಾಗಿದ್ದಾರೆ. ಧಾರ್ಮಿಕ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡು ವಾಪಸಾಗುವಾಗ ಗುಂಡಿನ ದಾಳಿ ನಡೆದಿದೆ ಎಂದು ತಿಳಿದುಬಂದಿದೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ