ಉಡುಪಿ, ನ.14: ನಾಲ್ವರನ್ನು ಬರ್ಬರವಾಗಿ ಹತ್ಯೆಗೈದ ದುಷ್ಕರ್ಮಿಯನ್ನು ಉಡುಪಿ ಪೊಲೀಸರು ಯಶಸ್ವಿಯಾಗಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ತಿಳಿದು ಬಂದಿದೆ. ಅದರೆ ಪೊಲೀಸರು ಅಧಿಕೃತವಾಗಿ ಇನ್ನಷ್ಟೇ ಧೃಡ ಪಡಿಸಬೇಕಾಗಿದೆ.
ಸಿಸಿಟಿವಿ ದೃಶ್ಯಾವಳಿಗಳನ್ನು ಬಳಸಿಕೊಂಡು, ಪೊಲೀಸ್ ಅಧಿಕಾರಿಗಳು ಶಂಕಿತನನ್ನು ಪತ್ತೆಹಚ್ಚಿದ್ದಾರೆ ತಕ್ಷಣವೇ ಆತನನ್ನು ಕಸ್ಟಡಿಗೆ ತೆಗೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.
ಉಡುಪಿ ಜಿಲ್ಲೆಯ ನೇಜಾರಿನಲ್ಲಿ ಭಾನುವಾರ ಬೆಳ್ಳಂಬೆಳಗ್ಗೆ ನಡೆದ ಆಘಾತಕಾರಿ ಘಟನೆಯಲ್ಲಿ ಅಪರಿಚಿತ ದುಷ್ಕರ್ಮಿಯೊಬ್ಬ ನಾಲ್ವರನ್ನು ಹತ್ಯೆಗೈದಿದ್ದ.
ಪೊಲೀಸ್ ಮೂಲಗಳ ಪ್ರಕಾರ, ಶಂಕಿತನನ್ನು ಬಂಧಿಸಲಾಗಿದ್ದು, ತನಿಖೆಯನ್ನು ಮುಂದುವರಿಸಲಾಗಿದೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ