Slider

ಮಾಜಿ ಸಚಿವ, ಹಿರಿಯ ರಾಜಕೀಯ ಮುತ್ಸದ್ದಿ ಶ್ರೀಯುತ ಡಿ.ಬಿ.ಚಂದ್ರೇಗೌಡ ನಿಧನ

 

ಚಿಕ್ಕಮಗಳೂರು : ಮಾಜಿ ಸಚಿವ, ಹಿರಿಯ ರಾಜಕೀಯ ಮುತ್ಸದ್ದಿ ಶ್ರೀಯುತ ಡಿ.ಬಿ.ಚಂದ್ರೇಗೌಡರು(87 ವರ್ಷ) ಮಂಗಳವಾರ ತಮ್ಮ ದಾರದಹಳ್ಳಿಯ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಕಳೆದ ಕೆಲ ದಿನಗಳಿಂದ ಅವರು ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು.

ಬಿಜೆಪಿ ಹಿರಿಯ ನಾಯಕರು ಇಂದು ಅವರ ಪಾರ್ಥಿವ ಶರೀರದ ದರ್ಶನಕ್ಕೆ ಆಗಮಿಸಲಿದ್ದಾರೆ. ಮಂಗಳವಾರ ಮಧ್ಯಾಹ್ನ 2 ರಿಂದ ಸಂಜೆ 6ರ ವರೆಗೆ ಮೂಡಿಗೆರೆ ಅಡ್ಯಂತಾಯ ರಂಗದಮಂದಿರದಲ್ಲಿ ಡಿ.ಬಿ. ಚಂದ್ರೇಗೌಡರ ಪಾರ್ಥಿವ ಶರೀರವನ್ನು ಸಾರ್ವಜನಿಕ ಅಂತಿಮ ದರ್ಶನಕ್ಕೆ ಇರಿಸಲಾಗುವುದು. ಬುಧವಾರ ಮಧ್ಯಾಹ್ನ ದಾರದಹಳ್ಳಿಯ ಅವರ ಪೂರ್ಣಚಂದ್ರ ಎಸ್ಟೇಟ್ ನಲ್ಲಿ ಅಂತಿಮ ಸಂಸ್ಕಾರ ನೆರವೇರಿಸಲಾಗುವುದು ಎಂದು ಅವರ ಕುಟುಂಬಸ್ಥರು ತಿಳಿಸಿದ್ದಾರೆ.







0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo