ಉಡುಪಿ : ಕರಾವಳಿಯಲ್ಲಿ ಸೋಮವಾರದಿಂದ ಮೂರು ದಿನಗಳ ಕಾಲ ಗುಡುಗು ಸಿಡಿಲು ಸಹಿತ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಈ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾಡಳಿತ ಜಿಲ್ಲೆಯಲ್ಲಿ ಯಲ್ಲೋ ಅಲರ್ಟ್ ಘೋಷಿಸಿದೆ.
ಕಳೆದ ಮೂರ್ನಾಲ್ಕು ದಿನಗಳಿಂದ ಮೋಡ ಕವಿದ ಮಳೆಯಾಗುತ್ತಿದೆ. ರಾತ್ರಿ ಲಘುವಾಗಿ ಭಾನುವಾರ ಮಧ್ಯಾಹ್ನ ಕಾಪು ಮತ್ತು ಕಾರ್ಕಳ ತಾಲೂಕುಗಳಲ್ಲಿ ಉತ್ತಮ ಮಳೆಯಾಗಿದೆ. ಉಡುಪಿ ಜಿಲ್ಲೆಯಾದ್ಯಂತ ಬತ್ತದ ಬೆಳೆ ಬಲಿತಿದ್ದು ಕೊಯ್ಲಿಗೆ ಸಿದ್ಧವಾಗಿದೆ. ಆರಂಭದಲ್ಲಿ ಮಳೆಯ ಕೊರತೆಯಿಂದ ಸಂಕಷ್ಟಕ್ಕೊಳಗಾಗಿದ್ದ ರೈತರು ಈಗ ತಯಾರಿ ನಡೆಸುತ್ತಿರುವಾಗಲೇ ಅಕಾಲಿಕವಾಗಿ ಸುರಿಯುತ್ತಿರುವ ಮಳೆ ರೈತರ ಆತಂಕಕ್ಕೆ ಕಾರಣವಾಗಿದೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ