ಉಡುಪಿ: ಮಾಜಿ ಶಾಸಕ ರಘುಪತಿ ಭಟ್ ಪತ್ನಿ ಪದ್ಮಪ್ರಿಯ ನಾಪತ್ತೆ, ಆತ್ಮಹತ್ಯೆ ಪ್ರಕರಣದ ಆರೋಪಿ ಅತುಲ್ ರಾವ್‌ಗೆ ಒಂದು ವರ್ಷ ಜೈಲು ಶಿಕ್ಷೆ ಮತ್ತು ದಂಡ ವಿಧಿಸಿ ಉಡುಪಿ ಜಿಲ್ಲಾ ಸಿಜೆಎಂ ನ್ಯಾಯಾಲಯ ಮಹತ್ವದ ತೀರ್ಪು ನೀಡಿದೆ.
2008ರ ಜೂನ್ 10 ರಂದು ನಡೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೋಸ, ವಂಚನೆ, ನಕಲಿ ದಾಖಲೆ ಸೃಷ್ಟಿ ಆರೋಪದಡಿ ದೂರು ದಾಖಲಾಗಿತ್ತು. ಪದ್ಮಪ್ರಿಯ ದೆಹಲಿಗೆ ತೆರಳಲು ಅತುಲ್ ರಾವ್ ಅನುಕೂಲ ಮಾಡಿಕೊಟ್ಟಿದ್ದ. ಪ್ರಕರಣದಲ್ಲಿ ಮಣಿಪಾಲ ಠಾಣಾ ಪೊಲೀಸ್ ಹಾಗೂ ಸಿಒಡಿ ಅಧಿಕಾರಿಗಳು ತನಿಖೆ ನಡೆಸಿದ್ದರು.
2009ರಲ್ಲಿ ಅಂತಿಮ ಚಾರ್ಜ್ ಶೀಟ್ ಸಲ್ಲಿಸಲಾಗಿತ್ತು. ಅಂದು ಶಾಸಕರಾಗಿದ್ದ ರಘುಪತಿ ಭಟ್ ನೀಡಿದ ದೂರಿನ ಆಧಾರದಲ್ಲಿ ಪ್ರಕರಣ ದಾಖಲಾಗಿತ್ತು. ಪದ್ಮಪ್ರಿಯ ಅಪಹರಣವಾಗಿದೆ ಎಂಬಂತೆ ಬಿಂಬಿಸಿ ಆಕೆಯನ್ನು ಅತುಲ್ ದೆಹಲಿಗೆ ಕರೆದೊಯ್ದಿದ್ದ. ಪದ್ಮಪ್ರಿಯ ದೆಹಲಿಗೆ ತೆರಳಲು ಅತುಲ್ ನಕಲಿ ದಾಖಲೆ ಸೃಷ್ಟಿಸಿದ್ದ. ನಂತರ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪದ್ಮಪ್ರಿಯ ಪತ್ತೆಯಾಗಿದ್ದರು. ಇದೀಗ ಪ್ರಕರಣದಲ್ಲಿ ಆರೋಪಿಗೆ ಜೈಲು ಶಿಕ್ಷೆಯಾಗಿದೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ