ಬೆಂಗಳೂರು:- ಬಿಜೆಪಿ ನೂತನ ರಾಜ್ಯಾಧ್ಯಕ್ಷರಾಗಿರುವ ಬಿವೈ ವಿಜಯೇಂದ್ರ ಇಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಬೆಳಗ್ಗೆ 10ಗಂಟೆ ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿ ಪದಗ್ರಹಣ ಸಮಾರಂಭ ನಡೆಯಲಿದೆ. ಅದಕ್ಕೂ ಮೊದಲು ಬೆಳಗ್ಗೆ 9.45ಕ್ಕೆ ಬಿಜೆಪಿ ರಾಜ್ಯ ಕಚೇರಿಯಲ್ಲಿ ಬಿವೈವಿಗೆ ಪೂರ್ಣಕುಂಭ ಸ್ವಾಗತ ನೀಡಲಾಗುತ್ತೆ.
ಬಳಿಕ ಗೋಪೂಜೆ ನೆರರೇವರಿಸಲಿದ್ದಾರೆ. ಗಣಪತಿ ಹೋಮದ ಪೂರ್ಣಾಹುತಿ ನಂತರ ವಿಜಯೇಂದ್ರಗೆ ಹಾಲಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅಧಿಕಾರ ಹಸ್ತಾಂತರ ಮಾಡಲಿದ್ದಾರೆ.
ಬಿಜೆಪಿ ಕಚೇರಿಯಲ್ಲಿ ನಿನ್ನೆ ರಾತ್ರಿಯಿಂದಲೇ ಪೂಜೆ, ಹೋಮ ಹವನಗಳು ನೆರವೇರುತ್ತಿವೆ. ನಿನ್ನೆ ದುರ್ಗಾಹೋಮ, ಗಣಪತಿ ಹೋಮ ನಡೆದಿದೆ. ಇನ್ನು ಮಲ್ಲೇಶ್ವರಂನಲ್ಲಿ ರಸ್ತೆಯುದ್ಧಕ್ಕೂ ಬಿಜೆಪಿ ಬಾವುಟಗಳು ರಾರಾಜಿಸುತ್ತಿವೆ. ಎಲ್ಲೆಲ್ಲೂ ವಿಜಯೇಂದ್ರ ಪೋಸ್ಟರ್‌ಗಳು ಮಿಂಚುತ್ತಿವೆ. ಅಲ್ಲದೇ ಬಿಜೆಪಿ ಕಚೇರಿ ತಳಿರು ತೋರಣಗಳಿಂದ ಸಿಂಗಾರಗೊಂಡಿದೆ. ಕಮಲಪಾಳಯದಲ್ಲಿ ಹಬ್ಬದ ವಾತಾವರಣವೇ ನಿರ್ಮಾಣವಾಗಿದೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ