ಉಡುಪಿ: ಅಲೆವೂರು -ಮಣಿಪಾಲ ರಸ್ತೆಯ ವಿಠ್ಠಲ ಸಭಾಭವನದ ಬಳಿ ನಿನ್ನೆ ಸಂಜೆ 6.30ರ ಸುಮಾರಿಗೆ ಟೆಂಪೊ ಮತ್ತು ಸ್ಕೂಟರ್ ಮಧ್ಯೆ ಸಂಭವಿಸಿದ ಅಪಘಾತದಲ್ಲಿ ಸವಾರರೊಬ್ಬರು ಮೃತಪಟ್ಟ ಬಗ್ಗೆ ವರದಿಯಾಗಿದೆ.
ಮೃತರನ್ನು ಮಣಿಪಾಲ ಪ್ರಗತಿನಗರದ ಮುಹಮ್ಮದ್ ತನ್ಸಿಲ್(28) ಎಂದು ಗುರುತಿಸಲಾಗಿದೆ. ಅಲೆವೂರು ಕಡೆಯಿಂದ ಮಂಚಿ ಕಡೆಗೆ ಹೋಗುತ್ತಿದ್ದ ಸ್ಕೂಟರ್ಗೆ ಎದುರಿನಿಂದ ಬಂದ ಟೆಂಪೋ ಢಿಕ್ಕಿ ಹೊಡೆಯಿತು. ಇದರಿಂದ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ತನ್ಸಿಲ್ ಸ್ಥಳದಲ್ಲಿಯೇ ಮೃತಪಟ್ಟರು.
ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ