Slider

ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಉದ್ಯಮಿಗೆ ವಂಚನೆ ಪ್ರಕರಣ; ಅಭಿನವ ಹಾಲಶ್ರೀಗೆ ಹೈಕೋರ್ಟ್ ಷರತ್ತು ಬದ್ದ ಜಾಮೀನು

 

ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಅಮೀಷ ಒಡ್ಡಿದ ಗೋವಿಂದ ಬಾಬು ಪೂಜಾರಿಗೆ ವಂಚನೆ ಮಾಡಿರುವ ಪ್ರಕರಣದಲ್ಲಿ ಜೈಲುಪಾಲಾಗಿರುವ 3ನೇ ಆರೋಪಿಯಾಗಿರುವ ಅಭಿನವ ಹಾಲಶ್ರೀಗೆ ಹೈಕೋರ್ಟ್ ಷರತ್ತು ಬದ್ದ ಜಾಮೀನು ಮಂಜೂರು ಮಾಡಿದೆ.

ಹೈಕೋರ್ಟ್ ಏಕಸದಸ್ಯ ಪೀಠದ ವತಿಯಿಂದ ಈ ಜಾಮೀನು ಮಂಜೂರು ಮಾಡಿದೆ. ವಂಚನೆ ಪ್ರಕರಣದಲ್ಲಿ ತನ್ನ ಹೆಸರು ಕೇಳಿಬಂದಾಗ ತಲೆಮರೆಸಿಕೊಂಡಿದ್ದ ಹಾಲಶ್ರೀ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಆದ್ರೆ ಈ ಜಾಮೀನು ಅರ್ಜಿಯನ್ನು ಬೆಂಗಳೂರಿನ ಸಿಸಿಹೆಚ್ 57ನೇ ನ್ಯಾಯಾಲಯ ವಜಾಗೊಳಿಸಿತ್ತು.

ಜಾಮೀನು ನೀಡದಂತೆ ಈ ಹಿಂದೆ ಸಿಸಿಬಿ ಆಕ್ಷೇಪಣೆ ಸಲ್ಲಿಸಿತ್ತು.ಬಳಿಕ ಹಾಲಶ್ರೀ ಪರ ವಕೀಲರು, ವಂಚನೆ ಪ್ರಕರಣದಲ್ಲಿ ಹಾಲಶ್ರೀ ವಿರುದ್ಧ ಯಾವುದೇ ಆರೋಪವಿಲ್ಲ, ಚೈತ್ರಾ ವಿರುದ್ಧ ಮಾತ್ರ ವಂಚನೆ ಆರೋಪವಿದೆ. ಹೀಗಾಗಿ ಅಭಿನವ ಹಾಲಶ್ರೀಗೆ ಮಧ್ಯಂತರ ನಿರೀಕ್ಷಣಾ ಜಾಮೀನು ನೀಡಲು ಮನವಿ ಮಾಡಿದ್ದರು.

ಈ ಕುರಿತು ಸುದಿರ್ಘ ವಿಚಾರಣೆ ನಡೆಸಿದ್ದ ಕೋರ್ಟ್, ಜಾಮೀನು ಅರ್ಜಿಗೆ ಆಕ್ಷೇಪಣೆ ಸಲ್ಲಿಸುವಂತೆ ಸಿಸಿಬಿಗೆ ಸೂಚಿಸಿತ್ತು. ಈ ನಡುವೆ ಹಾಲಶ್ರೀಗೆ ನಿರೀಕ್ಷಣಾ ಜಾಮೀನು ನೀಡದಂತೆ ವಂಚನೆಗೆ ಒಳಗಾದ ಉದ್ಯಮಿ ಗೋವಿಂದಬಾಬು ಪೂಜಾರಿ ಕೋರ್ಟ್‌ ಮಧ್ಯಂತರ ಅರ್ಜಿ ಸಲ್ಲಿಸಿದ್ದರು.







0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo