Slider

ಮಂಗಳೂರು: ಕ್ಷುಲ್ಲಕ ಕಾರಣಕ್ಕೆ ಹುಲಿವೇಷ ತಂಡದ ನಾಯಕನ ಬರ್ಬರ ಹತ್ಯೆ

 

ಮಂಗಳೂರು: ಹುಲಿವೇಷ ತಂಡದ ಮುಖ್ಯಸ್ಥನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ದಕ್ಷಿಣಕನ್ನಡ  ಜಿಲ್ಲೆಯ ಪುತ್ತೂರು ತಾಲೂಕಿನ ನೆಹರು ನಗರ ಜಂಕ್ಷನ್​ನಲ್ಲಿ ನಡೆದಿದೆ.

ಮೃತನನ್ನು ಪುತ್ತೂರಿನ ಕಲ್ಲೇಗ ಟೈಗರ್ಸ್ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಎಂದು ಗುರುತಿಸಲಾಗಿದೆ. ಕೊಲೆ ನಂತರ ಮೂವರು ಆರೋಪಿಗಳ ಪೈಕಿ ಇಬ್ಬರು ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದಾರೆ. ಬನ್ನೂರು ನಿವಾಸಿ ಮನೀಷ್  ಚೇತು ಬಂಧಿತ ಆರೋಪಿಗಳಾಗಿದ್ದು, ಮತ್ತೊಬ್ಬ ಆರೋಪಿ ತಲೆಮರೆಸಿಕೊಂಡಿದ್ದಾನೆ. ದ್ವಿಚಕ್ರ ವಾಹನಗಳ ನಡುವೆ ನಡೆದ ಅಪಘಾತ ವಿಚಾರದಲ್ಲಿ ಎರಡು ಸಾವಿರ ನೀಡುವ ಬಗ್ಗೆ ಮಾತುಕತೆ ನಡೆದಿದೆ.

ಈ ವೇಳೆ ಬಸ್ ಚಾಲಕ ಚೇತು ಎಂಬಾತನ ಬೆಂಬಲಿಗ ಹಾಗೂ ಅಕ್ಷಯ್ ನಡುವೆ ತೀವ್ರ ವಾಗ್ವಾದ ನಡೆದಿದೆ. ಹೀಗೆ ಆರಂಭವಾದ ಗಲಾಟೆ ವಿಕೋಪಕ್ಕೆ ತಿರುಗಿದೆ. ಕೊನೆಗೆ ಮಾಣಿ ಮೈಸೂರು ಹೆದ್ದಾರಿಯ ನೆಹರು ನಗರ ಜಂಕ್ಷನ್​ನಲ್ಲಿ ಅಕ್ಷಯ್​ನನ್ನ ಅಟ್ಟಾಡಿಸಿ ತಲವಾರಿನಿಂದ ಕೊಚ್ಚಿ ಕೊಲೆ ಮಾಡಿದ್ದಾರೆ.

ಅಕ್ಷಯ್ ಹತ್ಯೆ ಬಳಿಕ ಮನೀಷ್ ಮತ್ತು ಚೇತು ಪೊಲೀಸ್ ಠಾಣೆಗೆ ಶರಣಾಗಿದ್ದಾರೆ. ಘಟನೆ ಸಂಬಂಧ ಸ್ಥಳಕ್ಕೆ ಆಗಮಿಸಿದ ಪುತ್ತೂರು ನಗರ ಠಾಣಾ ಪೊಲೀಸರು, ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಹತ್ಯೆಗೆ ಬೇರೆ ಕಾರಣಗಳು ಇದೆಯಾ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸಲಾಗುತ್ತಿದೆ.








0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo