ಉಡುಪಿ ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪ್ರವೀಣ್ ಅರುಣ್ ಚೌಗುಲೆಗೆ 14ದಿನ ಪೊಲೀಸ್ ಕಸ್ಟಡಿ ವಿಧಿಸಿ ಒಂದನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಹಾಗೂ ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿಗಳ ನ್ಯಾಯಾಲಯ ಆದೇಶಿಸಿದೆ.
ಆರೋಪಿಯನ್ನು ಇಂದು ನ್ಯಾಯಾಲಯಕ್ಕೆ ಹಾಜರು ಪಡಿಸುವ ಮುನ್ನ ನ್ಯಾಯಾಲಯದ ಆವರಣದಲ್ಲಿ ಸೇರಿದಂತೆ ಬಿಗಿ ಭದ್ರತೆ ಏರ್ಪಾಡಿಸಲಾಗಿತ್ತು. ಮೂವರು ಡಿವೈಎಸ್ಪಿ, 25 ಎಎಸ್‌ಐ, ಐವರು ಪಿಎಸ್‌ಐ, ಮೂವರು ಇನ್‌ಸ್ಪೆಕ್ಟರ್‌ಗಳು, 150 ಕಾನ್‌ಸ್ಟೆಬಲ್‌ಗಳು, ಆರು ಡಿಎಆರ್ ಬೆಟಾಲಿಯನ್‌ಗಳು ಮತ್ತು ಮೂವರು ಕೆಎಸ್‌ಆರ್‌ಪಿ ಸಿಬ್ಬಂದಿಗಳನ್ನು ಭದ್ರತೆಗೆ ನಿಯೋಜಿಸಲಾಗಿತ್ತು.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ