ಚೆನ್ನೈ: ಕೊನೆವರೆಗೂ ಸನಾತನ ಧರ್ಮ ವಿರೋಧಿಸುತ್ತೇನೆ ಎಂದು ತಮಿಳುನಾಡು ಸಚಿವ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮತ್ತೆ ತಮ್ಮ ನಿಲುವನ್ನು ಸಮರ್ಥಿಸಿಕೊಂಡಿದ್ದಾರೆ.
ಸನಾತನ ಧರ್ಮವನ್ನು‘ಡೆಂಗ್ಯೂ’ ಮತ್ತು ‘ಮಲೇರಿಯಾ’ಗೆ ಹೋಲಿಸಿದ್ದ ಉದಯನಿಧಿ ಸ್ಟಾಲಿನ್, ತಾನು ಯಾವುದೇ ತಪ್ಪು ಹೇಳಿಕೆ ನೀಡಿಲ್ಲ ಎಂದಿದ್ದರು. ತಮ್ಮ ಹೇಳಿಕೆಗೆ ಸಂಬಂಧಿಸಿದಂತೆ ಕಾನೂನು ಪರಿಣಾಮ ಎದುರಿಸಲು ಸಿದ್ಧ ಎಂದು ಹೇಳಿದ್ದರು. ನಾನೇನೂ ತಪ್ಪಾಗಿ ಹೇಳಿಲ್ಲ. ನಾನು ಹೇಳಿದ್ದು ಸರಿ, ಅದನ್ನು ಕಾನೂನಾತ್ಮಕವಾಗಿ ಎದುರಿಸುತ್ತೇನೆ.
ನನ್ನ ಹೇಳಿಕೆಯನ್ನು ಬದಲಾಯಿಸುವುದಿಲ್ಲ. ನನ್ನ ಸಿದ್ಧಾಂತವನ್ನು ಮಾತನಾಡಿದ್ದೇನೆ. ಅಂಬೇಡ್ಕರ್, ಪೆರಿಯಾರ್ ಹೇಳಿದ್ದಕ್ಕಿಂತ ಹೆಚ್ಚಾಗಿ ಮಾತನಾಡಿಲ್ಲ. ನಾನು ಎಂಎಲ್‌ಎ ಆಗಬಹುದು, ಮಂತ್ರಿಯಾಗಬಹುದು ಅಥವಾ ಯುವ ಘಟಕದ ಕಾರ್ಯದರ್ಶಿಯಾಗಿ ನಾಳೆ ನಾನು ಇರಬಹುದು.
ಆದರೆ ಮನುಷ್ಯನಾಗಿರುವುದು ಹೆಚ್ಚು ಮುಖ್ಯ ಎಂದು ತಿಳಿಸಿದ್ದಾರೆ. ಇದು (ಸನಾತನ) ನೂರಾರು ವರ್ಷಗಳ ಸಮಸ್ಯೆಯಾಗಿದೆ. ನಾವು ಇದನ್ನು ಕೊನೆವರೆಗೂ ವಿರೋಧಿಸುತ್ತೇವೆ ಎಂದು ಸ್ಪಷ್ಟಪಡಿಸಿದ್ದಾರೆ. ಸೆಪ್ಟೆಂಬರ್ನಲ್ಲಿ ಮಾತನಾಡಿದ್ದ ಉದಯನಿಧಿ ಸ್ಟಾಲಿನ್, ಸನಾತನ ಧರ್ಮದ ನಿರ್ಮೂಲನೆ ಆಗಬೇಕು. ಅದು ಸಾಮಾಜಿಕ ನ್ಯಾಯ ಮತ್ತು ಸಮಾನತೆಗೆ ವಿರುದ್ಧವಾಗಿದೆ ಎಂದು ಕರೆ ನೀಡಿದ್ದರು.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ