ಬೆಂಗಳೂರು: ರಾಜ್ಯ ಬಿಜೆಪಿ ಒಂದೇ ಕುಟುಂಬಕ್ಕೆ ಸೀಮಿತ ಆಗಬಾರದು. ಇದನ್ನು ನಾವು ಒಪ್ಪುವುದಿಲ್ಲ ಎಂದು ಹಿಂದು ಫೈರ್‌ಬ್ರಾಂಡ್, ಮಾಜಿ ಸಚಿವ, ಬಿಜೆಪಿ ಪ್ರತಿಪಕ್ಷ ನಾಯಕ ಸ್ಥಾನದ ಆಕಾಂಕ್ಷಿ ಮಾಜಿ ಸಚಿವ, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿದ ಬಸನಗೌಡ ಪಾಟೀಲ್ ಯತ್ನಾಳ್, ನಾನು ಯಾವುದೇ ಡಿಮ್ಯಾಂಡ್ ಇಟ್ಟಿಲ್ಲ. ನಾನು ಇವರ ರೀತಿ ಕೆಳಮಟ್ಟಕ್ಕೆ ಇಳಿಯಲ್ಲ. ಅಧ್ಯಕ್ಷ ಬೇಕು, ವಿಪಕ್ಷ ನಾಯಕ ಸ್ಥಾನ ಬೇಕು ಅಂತ ಕೇಳಿಲ್ಲ. ರಾಜ್ಯದ ಅಡ್ಜೆಸ್ಟ್‌ಮೆಂಟ್ ಬಗ್ಗೆ ಹೇಳಿದ್ದೇನೆ ಎಂದು ತಿಳಿಸಿದರು.
ಕೆಲವೇ ಚೇಲಾಗಳ ಮಾತು ಕೇಳಿ ಕೇಂದ್ರ ನಾಯಕರು ತೀರ್ಮಾನ ಮಾಡಬಾರದು. ಕೆಲವರು ಬ್ಲ್ಯಾಕ್‌ಮೇಲ್ ಮಾಡುತ್ತಾರೆ. ನಾನು ಅದಕ್ಕೆ ಭಯ ಬೀಳುವುದಿಲ್ಲ. ನಾನು ಎಲ್ಲವನ್ನೂ ಹೇಳಿದ್ದೇನೆ. ವೀಕ್ಷಕರು ನನ್ನ ಹೇಳಿಕೆಯಿಂದ ಖುಷಿಯಾಗಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಜೆ.ಪಿ. ನಡ್ಡಾ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಈ ಬಗ್ಗೆ ಗಮನಕ್ಕೆ ತರುವುದಾಗಿ ತಿಳಿಸಿದ್ದಾರೆ ಎಂದು ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದರು.
ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ವೈ. ವಿಜಯೇಂದ್ರ ಆಯ್ಕೆ ಬಗ್ಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದ ಅವರು, ಈ ಬಸನಗೌಡ ಪಾಟೀಲ್ ಯತ್ನಾಳ್‌ನನ್ನು ಖರೀದಿ ಮಾಡೋಕೆ ಆಗುವುದಿಲ್ಲ ಎಂದು ಹೇಳಿದ್ದಾರೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ