ಬೆಂಗಳೂರು: ಪೋಕ್ಸೋ ಪ್ರಕರಣದಲ್ಲಿ ಜೈಲುಪಾಲಾಗಿದ್ದ ಮುರುಘಾ ಮಠದ ಶಿವಮೂರ್ತಿ ಮುರುಘಾ ಶ್ರೀಗಳಿಗೆ ಜಾಮೀನು ಮಂಜೂರಾಗಿದೆ.
ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೈಲು ಸೇರಿದ್ದ ಚಿತ್ರದುರ್ಗದ ಮುರುಘಾ ಶ್ರೀ ಅವರಿಗೆ ಒಂದು ಪ್ರಕರಣದಲ್ಲಿ ಹೈಕೋರ್ಟ್ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ.
ಚಿತ್ರದುರ್ಗಕ್ಕೆ ಮುರುಘಾ ಶ್ರೀಗಳಿಗೆ ಪ್ರವೇಶವಿಲ್ಲ ಸೇರಿದಂತೆ 7 ಷರತ್ತುಗಳನ್ನು ವಿಧಿಸಿ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಆದರೆ ಜಾಮೀನು ಸಿಕ್ಕರೂ ಮುರುಘಾ ಶ್ರೀಗಳಿಗೆ ಸದ್ಯಕ್ಕೆ ಬಿಡುಗಡೆ ಭಾಗ್ಯವಿಲ್ಲ. ಕಾರಣ ಮತ್ತೊಂದು ಪ್ರಕರಣದ ಅರ್ಜಿ ವಿಚಾರಣೆ ಬಾಕಿ ಇರುವುದರಿಂದ ಮುರುಘಾ ಶ್ರೀ ಜೈಲಿನಲ್ಲೇ ಕಾಲ ಕಳೆಯಬೇಕಾಗಿದೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ