ಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮಕ್ಕೆ ಸಂಬಂಧ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್, ಮರು ಪರೀಕ್ಷೆ ನಡೆಸುವ ಸರ್ಕಾರದ ಆದೇಶವನ್ನು ಎತ್ತಿ ಹಿಡಿದಿದೆ. ಅಕ್ರಮದ ಹಿನ್ನೆಲೆಯಲ್ಲಿ ಮರು ಪರೀಕ್ಷೆ ನಡೆಸಲು ಸರ್ಕಾರ ನೀಡಿರುವ ಆದೇಶ ಪ್ರಶ್ನಿಸಿ ಕೆಲ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದರು.
ಈ ಅರ್ಜಿಯನ್ನು ವಜಾಗೊಳಿಸಿರುವ ಹೈಕೋರ್ಟ್, ಸರ್ಕಾರದ ಆದೇಶದಂತೆ ಪಿಎಸ್‌ಐ ಮರು ಪರೀಕ್ಷೆ ನಡೆಸುವಂತೆ ಆದೇಶ ಹೊರಡಿಸಿದೆ.
ಅಕ್ರಮದ ಕಾರಣಕ್ಕೆ ಪರೀಕ್ಷೆ ರದ್ದು ಮಾಡಿ ಹೊಸದಾಗಿ ಪರೀಕ್ಷೆ ನಡೆಸಲು ಸರ್ಕಾರ ಆದೇಶ ಹೊರಡಿಸಿತ್ತು. ಇದನ್ನು ಪ್ರಶ್ನಿಸಿ ಹಲವು ಅಭ್ಯರ್ಥಿಗಳು ಹೈಕೋರ್ಟ್ ಮೊರೆ ಹೋಗಿದ್ದರು. ಇಂದು ನ್ಯಾ. ದಿನೇಶ್ ಕುಮಾರ್, ನ್ಯಾ. ಶಿವಶಂಕರೇಗೌಡ ಅವರಿದ್ದ ವಿಭಾಗೀಯ ಪೀಠ ಅರ್ಜಿ ವಿಚಾರಣೆ ನಡೆಸಿ ತೀರ್ಪು ಪ್ರಕಟಿಸಿದೆ
.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ