ಬ್ರಹ್ಮಾವರ: ಬ್ರಹ್ಮಾವರ ತಾಲ್ಲೂಕು ವಾರಂಬಳ್ಳಿ ಗ್ರಾಮದ ಬೇಳೂರುಜೆಡ್ಡು ಕ್ರಾಸ್ ಬಳಿ, ರಾ.ಹೆ 66 ರಲ್ಲಿ ವೇಗದೂತ ಬಸ್ಸೊಂದು ಬೈಕ್ ಗೆ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಬುಧವಾರ ಮದ್ಯಾಹ್ನ ನಡೆದಿದೆ.ಬ್ರಹ್ಮಾವರ: ಬ್ರಹ್ಮಾವರ ತಾಲ್ಲೂಕು ವಾರಂಬಳ್ಳಿ ಗ್ರಾಮದ ಬೇಳೂರುಜೆಡ್ಡು ಕ್ರಾಸ್ ಬಳಿ, ರಾ.ಹೆ 66 ರಲ್ಲಿ ವೇಗದೂತ ಬಸ್ಸೊಂದು ಬೈಕ್ ಗೆ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಬುಧವಾರ ಮದ್ಯಾಹ್ನ ನಡೆದಿದೆ.
ಮೃತಪಟ್ಟ ಯುವಕ ಪ್ರೀತಮ್ ಅಂತೋನಿ ಡಿಸಿಲ್ವ ಎಂದು ಗುರುತಿಸಲಾಗಿದೆ.
ಘಟನೆಗೆ ಸಂಬಂಧಿಸಿದಂತೆ ಕುಂದಾಪುರ ಕಡೆಯಿಂದ ಅತಿ ವೇಗದಿಂದ ಬಂದ ಖಾಸಗಿ ಬಸ್ಸು ಮುಂದೆ ಹೋಗುತ್ತಿದ್ದ ಪ್ರೀತಮ್ ಅವರ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬಸ್ಸಿನಡಿಗೆ ಬಿದ್ದ ಅವರು ಗಂಭೀರ ಸ್ವರೂಪದ ಗಾಯಗಳಾಗಿದ್ದು, ಕೂಡಲೇ ಸಮೀಪದ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದ್ದರೂ, ಅದಾಗಲೇ ಮೃತಪಟ್ಟಿದ್ದು ತಿಳಿದುಬಂದಿದೆ.
ನಂತರ ಬ್ರಹ್ಮಾವರ ಪೊಲೀಸ್ ಠಾಣಾಧಿಕಾರಿ ಮಧು ಬಿ.ಇ. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿ
ಬ್ರಹ್ಮಾವರ: ಬ್ರಹ್ಮಾವರ ತಾಲ್ಲೂಕು ವಾರಂಬಳ್ಳಿ ಗ್ರಾಮದ ಬೇಳೂರುಜೆಡ್ಡು ಕ್ರಾಸ್ ಬಳಿ ರಾ.ಹೆ 66 ರಲ್ಲಿ ವೇಗದೂತ ಬಸ್ಸೊಂದು ಬೈಕ್ ಗೆ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಬುಧವಾರ ಮದ್ಯಾಹ್ನ ನಡೆದಿದೆ.
ಮೃತಪಟ್ಟ ಯುವಕ ಪ್ರೀತಮ್ ಅಂತೋನಿ ಡಿಸಿಲ್ವ ಎಂದು ಗುರುತಿಸಲಾಗಿದೆ.
ಘಟನೆಗೆ ಸಂಬಂಧಿಸಿದಂತೆ ಕುಂದಾಪುರ ಕಡೆಯಿಂದ ಅತಿ ವೇಗದಿಂದ ಬಂದ ಖಾಸಗಿ ಬಸ್ಸು ಮುಂದೆ ಹೋಗುತ್ತಿದ್ದ ಪ್ರೀತಮ್ ಅವರ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬಸ್ಸಿನಡಿಗೆ ಬಿದ್ದ ಅವರು ಗಂಭೀರ ಸ್ವರೂಪದ ಗಾಯಗಳಾಗಿದ್ದು, ಕೂಡಲೇ ಸಮೀಪದ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದ್ದರೂ, ಅದಾಗಲೇ ಮೃತಪಟ್ಟಿದ್ದು ತಿಳಿದುಬಂದಿದೆ.
ನಂತರ ಬ್ರಹ್ಮಾವರ ಪೊಲೀಸ್ ಠಾಣಾಧಿಕಾರಿ ಮಧು ಬಿ.ಇ. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ