Slider

ನೇಜಾರು: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ: ಆರೋಪಿ ಪ್ರವೀಣ್ ಚೌಗುಲೆ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

 

ಉಡುಪಿ ನೇಜಾರಿನಲ್ಲಿ ನಾಲ್ವರನ್ನು ಕೊಂದ ಹಂತಕ ಆರೋಪಿ ಪ್ರವೀಣ್ ಅರುಣ್ ಚೌಗುಲೆ ನ್ಯಾಯಾಂಗ ಬಂಧನದ ಅವಧಿಯನ್ನು 14 ದಿನಗಳ ಕಾಲ ವಿಸ್ತರಿಸಿ ಉಡುಪಿ ನ್ಯಾಯಾಲಯ ಆದೇಶಿಸಿದೆ.

ನ್ಯಾಯಾಂಗ ಬಂಧನದಲ್ಲಿದ್ದ ಪ್ರವೀಣ್ ಚೌಗುಲೆ ಸದ್ಯ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದು ಆರೋಪಿಯನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಉಡುಪಿಯ ಪ್ರಧಾನ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್‌ಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು. ನ್ಯಾಯಾಧೀಶೆ ದೀಪಾ ಆರೋಪಿಗೆ ಮತ್ತೆ 14 ದಿನಗಳ ಕಾಲ ಅಂದರೆ ಡಿಸೆಂಬರ್ 18ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ನೀಡಿದರು. ಈ ಸಂದರ್ಭದಲ್ಲಿ ಹಿರಿಯ ಸಹಾಯಕ ಪಬ್ಲಿಕ್ ಪ್ರಾಸಿಕ್ಯುಟರ್ ಎಚ್.ಎಂ.ನದಾಫ್ ಮತ್ತು ಆರೋಪಿ ಪರ ನ್ಯಾಯಾಲಯ ನೇಮಿಸಿದ ಸರಕಾರಿ ವಕೀಲ ರಾಜು ಪೂಜಾರಿ ಹಾಜರಿದ್ದರು. ಆರೋಪಿ ಇನ್ನೂ ಕೂಡ ಖಾಸಗಿ ವಕೀಲರನ್ನು ನೇಮಕ ಮಾಡಿ ಕೊಂಡಿಲ್ಲ ಎಂದು ತಿಳಿದುಬಂದಿದೆ.










0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo