ಬೈಂದೂರು : ಕುಂದಾಪುರ ತಾಲೂಕಿನ ಗಂಗೊಳ್ಳಿ ಗ್ರಾಮದ ದಾಕು ಹಿತ್ತು ರಿಂಗ್ ರೋಡ್ ಬಳಿ ಸಾರ್ವಜನಿಕ ಸ್ಥಳದಲ್ಲಿ ಅಂದರ್ ಬಾಹರ್ ಇಸ್ಪೀಟು ಜುಗಾರಿ ಆಡುತ್ತಿದ್ದ ಅಡ್ಡೆಗೆ ಪೊಲೀಸರು ರೈಡ್ ನಡೆಸಿ, ಆರು ಮಂದಿ ಆರೋಪಿಗಳನ್ನು ವಶಕ್ಕೆ ಪಡೆದ ಘಟನೆ ಸಂಭವಿಸಿದೆ
ಇಸ್ಪೀಟು ಜುಗಾರಿ ಆಡುತ್ತಿದ್ದ ಮಿಥುನ್ ಖಾರ್ವಿ, ರವಿ ಖಾರ್ವಿ, ವಿಕ್ರಂ ಖಾರ್ವಿ, ಅಣ್ಣಪ್ಪ ಖಾರ್ವಿ, ಗಣಪತಿ ಮೇಸ್ತ, ಎಂಬುವರನ್ನು ವಶಕ್ಕೆ ಪಡೆದಿದ್ದು ವಿಜೇತ್ ಪೂಜಾರಿ ಎನ್ನುವರು ಓಡಿಹೋಗಿದ್ದು ನಂತರ ಪತ್ತೆ ಹೆಚ್ಚಲಾಗಿದೆ, ಗಂಗೊಳ್ಳಿ ಠಾಣಾಧಿಕಾರಿ ಹರೀಶ್ ಆರ್, ನಾಯ್ಕ ಮತ್ತು ಪೊಲೀಸರು ಸಿಬ್ಬಂದಿಗಳು ಖಚಿತ ಮಾಹಿತಿ ಮೇರೆಗೆ ಇಸ್ಪೀಟ್ ಅಡ್ಡೆ ಮೇಲೆ ದಾಳಿ ಮಾಡಿ ಆರು ಮಂದಿಗಳನ್ನು ಬಂಧಿಸಿ, ಬಳಿಕ ಕೃತ್ಯಕ್ಕೆ ಬಳಸಿದ ಇಸ್ಪೀಟ್ ಎಲೆಗಳು, ಮತ್ತು 2,850 ನಗದು ರೂ ವಶಪಡಿಸಿಕೊಂಡಿದ್ದಾರೆ.
ಈ ಘಟನೆ ಬಗ್ಗೆ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ