ಉಡುಪಿ, ಜ. 4: ಬಿಜೆಪಿ ಮುಖಂಡ, ಶಾರದಾ ಇಂಟರ್ನ್ಯಾಷನಲ್ ಹೊಟೇಲ್ ಮಾಲಕ ಬಿ. ಸುಧಾಕರ ಶೆಟ್ಟಿ ಅವರು ಗುರುವಾರ ಮುಂಜಾನೆ ಉಡುಪಿ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 72 ವರ್ಷ ವಯಸ್ಸಾಗಿತ್ತು. ತೀವ್ರ ಎದೆ ನೋವು ಕಾಣಿಸಿಕೊಂಡ ಕಾರಣ ಅವರನ್ನು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಅವರು ನಿಧನರಾದರು.
ಸರಳ ವ್ಯಕ್ತಿತ್ವದ ಸುಧಾಕರ ಶೆಟ್ಟಿ ಅವರು ಸಾಮಾನ್ಯ ಜನರೊಂದಿಗೂ ಉತ್ತಮ ಒಡನಾಟ ಹೊಂದಿದ್ದರು. ಕೊಡುಗೈ ದಾನಿಯಾಗಿ ಜಿಲ್ಲೆಯ ಹಲವಾರು ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ ಕಾರ್ಯಕ್ರಮಗಳಿಗೆ ಸಹಕಾರ ನೀಡುತ್ತಿದ್ದರು. ಮೂರು ಬಾರಿ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಸುಧಾಕರ ಶೆಟ್ಟಿಯವರು ಬಿಜೆಪಿ ಪಕ್ಷದಲ್ಲಿ ಜಿಲ್ಲಾಮಟ್ಟದಲ್ಲಿ ವಿವಿಧ ಹುದ್ದೆ ಅಲಂಕರಿಸಿ ಸಕ್ರಿಯರಾಗಿದ್ದರು.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ