ಚಿಕ್ಕಮಗಳೂರು ಜಿಲ್ಲಾ ಬಿಜೆಪಿ ಘಟಕದಲ್ಲಿ ಭಿನ್ನಮತ ಭುಗಿಲೆದ್ದಿದೆ. ಶೋಭಾ ಕರಂದ್ಲಾಜೆ ಅವರಿಗೆ ಟಿಕೆಟ್ ನೀಡದಂತೆ ಕಾರ್ಯಕರ್ತರು ಪಕ್ಷದ ಕಚೇರಿಯಲ್ಲೇ ಪ್ರತಿಭಟನೆ ನಡೆಸಿದ್ದಾರೆ.
ಚಿಕ್ಕಮಗಳೂರು ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಮಾಜಿ ಸಚಿವ ಜ್ಞಾನೇಂದ್ರ, ಪಕ್ಷದ ನಾಯಕ ಭಾನುಪ್ರಕಾಶ್ ಅವರ ಎದುರು ಶೋಭಾ ಕರಂದ್ಲಾಜೆಗೆ ವಿರುದ್ಧ ಘೋಷಣೆ ಕೂಗಿದ್ದಾರೆ. ಬಿಜೆಪಿ ಕಾರ್ಯಕರ್ತರು ಶೋಭಕ್ಕ ಗೋ ಬ್ಯಾಕ್ ಎಂದು ಘೋಷಣೆ ಕೂಗಿದ್ದಾರೆ. ಕಾಂಗ್ರೆಸ್ ನೊಂದಿಗೆ ಸೇರಿ ಸಿ.ಟಿ. ರವಿ ಅವರ ಸೋಲಿಗೆ ಕಾರಣರಾಗಿದ್ದಾರೆ. ಅವರಿಗೆ ಬಿಜೆಪಿ ಟಿಕೆಟ್ ಕೊಡಬಾರದು ಎಂದು ಕಾರ್ಯಕರ್ತರು ಒತ್ತಾಯಿಸಿದ್ದಾರೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ