Slider


ರಾಜ್ಯದಲ್ಲಿ ಆಸಿಡ್ ಮಾರಾಟ ನಿಷೇಧ; ಆಸಿಡ್ ದಾಳಿ ಸಂತ್ರಸ್ತರಿಗೆ ನಿವೇಶನ:-ಗೃಹಸಚಿವ ಡಾ.ಜಿ. ಪರಮೇಶ್ವರ್ ಹೇಳಿಕೆ

 


ರಾಜ್ಯದಲ್ಲಿ ಆಸಿಡ್ ಮಾರಾಟ ನಿಷೇಧಿಸಲಾಗುವುದು ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಘೋಷಿಸಿದ್ದಾರೆ. ಆಸಿಡ್ ದಾಳಿಗೆ ಒಳಗಾದ ಸಂತ್ರಸ್ತರಿಗೆ ನಿವೇಶನ ನೀಡುವುದಾಗಿ ತಿಳಿಸಿದ್ದಾರೆ. 

ಮಂಗಳೂರಿನಲ್ಲಿ ಇತ್ತೀಚೆಗೆ ಯುವಕನೊಬ್ಬ ಮೂವರು ಕಾಲೇಜು ವಿದ್ಯಾರ್ಥಿನಿಯರ ಮೇಲೆ ಆಸಿಡ್ ದಾಳಿ ಮಾಡಿದ್ದ ಹಿನ್ನೆಲೆಯಲ್ಲಿ ಗೃಹ ಸಚಿವರು ಈ ಬಗ್ಗೆ ಮಾಹಿತಿ ನೀಡಿದ್ದಾರೆ.

ಮಹಿಳೆಯರ ಮೇಲಿನ ದೌರ್ಜನ್ಯ ಕುರಿತ ವಿಚಾರ ಸಂಕಿರಣದಲ್ಲಿ ಭಾಗವಹಿಸಿದ್ದ ಸಚಿವರು, ವಿವಿಧ ಮಹಿಳಾ ಸಂಘಟನೆಗಳು ಮತ್ತು ಸರ್ಕಾರೇತರ ಸಂಸ್ಥೆಗಳ ಸಲಹೆ ಸ್ವೀಕರಿಸಿ, ರಾಜ್ಯದಲ್ಲಿ ಮಹಿಳಾ ಮತ್ತು ಮಕ್ಕಳ ಸುರಕ್ಷತೆಗೆ ಅಗತ್ಯತೆ ಕ್ರಮ ಕೈಗೊಳ್ಳಲಾಗಿದೆ. ದೌರ್ಜನ್ಯ ನಡೆದರೆ ಸಹಿಸುವುದಿಲ್ಲ. ಮಹಿಳೆಯರು ಮತ್ತು ಮಕ್ಕಳು ತಮ್ಮ ಸಮಸ್ಯೆಗಳಿಗೆ ಪರಿಹಾರ ಸಿಗದಿದ್ದರೆ ವಿಧಾನಸೌಧದ ಕಾರ್ಯಾಲಯ ಅಥವಾ ಗೃಹ ಕಚೇರಿಗೆ ಆಗಮಿಸಿ ನನ್ನನ್ನು ಭೇಟಿಯಾಗಿ ಸಮಸ್ಯೆ ಹೇಳಿಕೊಳ್ಳಬಹುದು ಎಂದು ತಿಳಿಸಿದ್ದಾರೆ.











0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo