ಕರ್ನಾಟಕದ ದಕ್ಷಿಣ ಹಾಗೂ ಉತ್ತರ ಒಳನಾಡಿನ ಬಹುತೇಕ ಕಡೆ ಉಷ್ಣ ಅಲೆ ಹೆಚ್ಚಾಗಲಿದ್ದು ರೆಡ್ ಅಲರ್ಟ್ ಘೋಷಿಸಲಾಗಿದೆ. ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ತುಮಕೂರಿನಲ್ಲಿ ಸೆಕೆ ವಿಪರೀತ ಹೆಚ್ಚಾಗಲಿದೆ.
ಮೇ 7ರಿಂದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ, ರಾಮನಗರ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ
ಕಲಬುರಗಿಯಲ್ಲಿ 42.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದೆ, ಎಚ್ಎಎಲ್ನಲ್ಲಿ 37.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 37.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 38.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 37.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ok
ಪ್ರತ್ಯುತ್ತರಅಳಿಸಿ