ಲೈಂಗಿಕ ದೌರ್ಜನ್ಯದ ಆರೋಪಕ್ಕೆ ಸಿಲುಕಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣನ ತಂದೆ ಎಚ್ ಡಿ ರೇವಣ್ಣ ಎಸ್ ಐಟಿ ವಿಚಾರಣೆಗೆ ಹಾಜರಾಗದಿದ್ದರೆ ಬಂಧಿಸಲಾಗುವುದು ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಹೇಳಿದ್ದಾರೆ.
ಕಲಬುರಗಿಯಲ್ಲಿ ಮಾತನಾಡಿದ ಅವರು, ಹಾಸನ ಪೆನ್ ಡ್ರೈವ್ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಎಚ್ ಡಿ ರೇವಣ್ಣ ಅವರನ್ನು ವಿಚಾರಣೆಗೆ ಎಸ್ ಐಟಿ ನೋಟಿಸ್ ನೀಡಿತ್ತು. ಅಕಸ್ಮಾತ್ ರೇವಣ್ಣ ವಿಚಾರಣೆಗೆ ಬರದಿದ್ದರೆ ತಕ್ಷಣವೇ ಅವರನ್ನು ಬಂಧಿಸುವುದಾಗಿ ಹೇಳಿದ್ದಾರೆ.
ಪೆನ್ ಡ್ರೈವ್ ಪ್ರಕರಣದಲ್ಲಿ ಮೊದಲ ಆರೋಪಿಯಾಗಿರುವ ರೇವಣ್ಣ ಬೆಂಗಳೂರಿನಲ್ಲೇ ಇದ್ದಾರೆ, ಹೀಗಿರುವಾಗ ಅವರು ವಿಚಾರಣೆಗೆ ಬರದಿದ್ದರೆ ಕಾನೂನು ಉಲ್ಲಂಘನೆ ಮಾಡಿದ್ದಂತೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಹೇಳಿದ್ದಾರೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ