ಕಾರ್ಕಳದ ಬೈಲೂರಿನಲ್ಲಿ ನಿರ್ಮಾಣವಾಗಿರುವ ಪರುಶುರಾಮ ಥೀಂ ಪಾರ್ಕ್ ಸಂಬಂಧಿಸಿದಂತೆ ಇದೀಗ ನಾಲ್ಕು ತಿಂಗಳಲ್ಲಿ ಕಾಮಗಾರಿ ಪೂರ್ಣಗೊಳಿಸಿ ಎಂದು ನಿರ್ಮಿತಿ ಕೇಂದ್ರಕ್ಕೆ ಹೈಕೋರ್ಟ ಆದೇಶ ನೀಡಿದೆ. ಪರಶುರಾಮ ಪ್ರತಿಮೆ ನಿರ್ಮಿಸಿದ ಶಿಲ್ಪಿ ಕೃಷ್ಣ ನಾಯ್ಕ್ ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯ ಮೂರ್ತಿ ಎಂ.ನಾಗಪ್ರಸನ್ನ ಆದೇಶ ಪ್ರಕಟಿಸಿದ್ದಾರೆ.
ಬಾಕಿ ಕೆಲಸ ಪೂರ್ಣಗೊಳಿಸುವುದಕ್ಕೆ ಸೂಕ್ತ ಭದ್ರತೆ ಹಾಗೂ ಅನುಕೂಲಕರ ವಾತಾವರಣ ನಿರ್ಮಿಸಿಕೊಡಿ ಎಂದು ಕೃಷ್ಣ ನಾಯ್ಕ್ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಈ ಬಗ್ಗೆ ಸುದೀರ್ಘ ವಿಚಾರಣೆ ನಡೆಸಿದ ನ್ಯಾಯಾಲಯ ಆದೇಶ ಪ್ರಕಟಗೊಂಡ ನಾಲ್ಕು ತಿಂಗಳೊಳಗಾಗಿ ಕಾಮಗಾರಿ ಪೂರ್ಣಗೊಳಿಸುವಂತೆ ಸೂಚಿಸಿದೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ