Slider

ಜಾಹೀರಾತಿಗಾಗಿ ಸಂಪರ್ಕಿಸಿ

ಫೋನ್: 86605 39735

ಕಾರ್ಕಳ:- ಪರಶುರಾಮ ಥೀಮ್ ಪಾರ್ಕ್ ಪ್ರಕರಣದ ತನಿಖೆ ಸಿಐಡಿಗೆ ವಹಿಸಿ ಆದೇಶ

Udupifirst-udupinews

 


ಉಡುಪಿ: ಕಾರ್ಕಳ ತಾಲೂಕಿನ ಎರ್ಲಪಾಡಿ ಗ್ರಾಮದ ಬೈಲೂರಿನಲ್ಲಿರುವ ಪರಶುರಾಮ ಥೀಮ್ ಪಾರ್ಕ್ ಕಾಮಗಾರಿಯಲ್ಲಿ ನಡೆದಿದೆ ಎನ್ನಲಾದ ಕಳಪೆ ಕಾಮಗಾರಿ ಹಾಗೂ ಭ್ರಷ್ಟಾಚಾರದ ಕುರಿತು ಸಿಐಡಿ ತನಿಖೆಗೆ ಆದೇಶಿಸಲಾಗಿದೆ.

ರಾಜ್ಯದ ಮುಖ್ಯಮಂತ್ರಿ ಅವರ ಫೆಬ್ರವರಿ ತಿಂಗಳ 6ರ ಟಿಪ್ಪಣಿಯಲ್ಲಿ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಸಚಿವರ ಪತ್ರದಲ್ಲಿ ಎರ್ಲಪಾಡಿ ಗ್ರಾಮದ ಬೈಲೂರಿನಲ್ಲಿರುವ ಪರಶುರಾಮ ಥೀಮ್ ಪಾರ್ಕ್ ಕಾಮಗಾರಿಯಲ್ಲಿ ಭ್ರಷ್ಟಾಚಾರ ಹಾಗೂ ಕಳಪೆ ಕಾಮಗಾರಿ ನಡೆದಿರುವುದಾಗಿ ಹಾಗೂ ಜನರ ಧಾರ್ಮಿಕ ಭಾವನೆಗಳಿಗೆ ಅಪಚಾರವಾಗುತ್ತಿರುವ ಮಾಹಿತಿ ಇದೆ.

ಈ ವಿಷಯದ ಕುರಿತು ಸತ್ಯಾಸತ್ಯತೆಯನ್ನು ಪರಿಶೀಲಿಸಲು ಸಿಐಡಿ ಅಥವಾ ಉನ್ನತ ಮಟ್ಟ ತನಿಖಾ ಸಂಸ್ಥೆಗೆ ವಹಿಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಕೋರಲಾಗಿತ್ತು. ಇದರಂತೆ ಮಹಾ ನಿರ್ದೇಶಕರ ಹಾಗೂ ಆರಕ್ಷಕ ಮಹಾ ನಿರೀಕ್ಷಕರ ಕೋರಿಕೆಯ ಹಿನ್ನೆಲೆಯಲ್ಲಿ ಕಳಪೆ ಕಾಮಗಾರಿ ಹಾಗೂ ಭ್ರಷ್ಟಾಚಾರದ ಕುರಿತಾದ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿ ಸರಕಾರ ಮೇ 3ರಂದು ಆದೇಶಹೊರಡಿಸಿದೆ.

ಪ್ರಕರಣದ ವಿಚಾರಣೆಯನ್ನು ಶೀಘ್ರವಾಗಿ ಪೂರ್ಣಗೊಳಿಸಿ ವಿಚಾರಣಾ ವರದಿಯನ್ನು ಸರಕಾರಕ್ಕೆ ಸಲ್ಲಿಸುವಂತೆ ಆದೇಶದಲ್ಲಿ ಸೂಚಿಸಲಾಗಿದೆ.







0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo