Slider

ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟ:- ಉಡುಪಿ ಪ್ರಥಮ ದಕ್ಷಿಣ ಕನ್ನಡ ದ್ವಿತೀಯ

Udupi

 


2023-24ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಎಂದಿನಂತೆ ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಒಟ್ಟಾರೆ ಶೇ. 73.40 ಮಕ್ಕಳು ತೇರ್ಗಡೆಯಾಗಿದ್ದಾರೆ.
ಬೆಂಗಳೂರಿನ ಮಲ್ಲೇಶ್ವರಂ ಕಚೇರಿಯಲ್ಲಿ ಮಂಡಳಿಯ ಅಧಿಕಾರಿಗಳು ಇಂದು ಬೆಳಗ್ಗೆ 10.30ಕ್ಕೆ ಸುದ್ದಿಗೋಷ್ಠಿ ನಡೆಸಿ ಫಲಿತಾಂಶವನ್ನು ಪ್ರಕಟಿಸಿದರು. ಮಂಡಳಿ ವೆಬ್‌ಸೈಟ್ https://karresults.nic.inನಲ್ಲಿ ಫಲಿತಾಂಶವನ್ನು ವೀಕ್ಷಿಸಬಹುದಾಗಿದೆ.

ಉಡುಪಿ 94ಶೇ. ಫಲಿತಾಂಶ ಪಡೆದು ಪ್ರಥಮ ಸ್ಥಾನ ಪಡೆದುಕೊಂಡಿದೆ .ಶೇ. 92.12 ಫಲಿತಾಂಶದೊಂದಿಗೆ ದಕ್ಷಿಣ ಕನ್ನಡ ಎರಡನೇ ಸ್ಥಾನದಲ್ಲಿದ್ದರೆ, ಶೇ. 88.67 ಫಲಿತಾಂಶದೊಂದಿಗೆ ಶಿವಮೊಗ್ಗ ಮೂರನೇ ಸ್ಥಾನದಲ್ಲಿದೆ. ಶೇ. 81.11 ಫಲಿತಾಂಶದೊಂದಿಗೆ ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಕಳೆದ ಬಾರಿ 87.87ರಷ್ಟು ಫಲಿತಾಂಶ ಬಂದಿತ್ತು. ಇನ್ನು ಬಾಲಕರು ಶೇ. 65.90 ಫಲಿತಾಂಶದೊಂದಿಗೆ ತೀವ್ರ ಕುಸಿತ ಕಂಡಿದ್ದಾರೆ. ಕಳೆದ ಬಾರಿ 80.08 ರಷ್ಟು ಫಲಿತಾಂಶ ಬಂದಿತ್ತು.

ಈ ಬಾರಿ ಒಟ್ಟು 8.69 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಇದರಲ್ಲಿ 4,41,910 ವಿದ್ಯಾರ್ಥಿಗಳು ಮತ್ತು 4,28,058 ವಿದ್ಯಾರ್ಥಿನಿಯರು ಪರೀಕ್ಷೆ ಹಾಜರಾಗಿದ್ದರು. ಕಳೆದ ವರ್ಷ ಶೇ.83.89 ಫಲಿತಾಂಶ ಪ್ರಕಟವಾಗಿತ್ತು.








0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo