ವಿಧಾನ ಪರಿಷತ್ ಟಿಕೆಟ್ ಕೈತಪ್ಪಿದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಬೆನ್ನಲ್ಲೇ ಪಕ್ಷೇತರ ಅಭರ್ಥಿಯಾಗಿ ಕಣಕ್ಕಿಳಿಯಲು ಉಡುಪಿ ಮಾಜಿ ಶಾಸಕ ಕೆ.ರಘುಪತಿ ಭಟ್ ಅವರು ನಿರ್ಧರಿಸಿದ್ದಾರೆ.
ಜೂನ್ 3ರಂದು ನಡೆಯಲಿರುವ ವಿಧಾನ ಪರಿಷತ್ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಇದರಲ್ಲಿ ರಘುಪತಿ ಭಟ್ ಅವರ ಹೆಸರು ಇಲ್ಲದನ್ನು ಗಮನಿಸಿ, ನೈರುತ್ಯ ಪದವೀಧರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಿರ್ಧರಿಸಿದ್ದೇನೆ ಎಂದು ಹೇಳಿದ್ದಾರೆ.
ಆದರೆ ಪಕ್ಷದಲ್ಲಿ ಹಣ ಬಲ, ಜಾತಿ ಬಲಕ್ಕೆ ಟಿಕೆಟ್ ಸಿಕ್ಕಿದೆ. ಹಾಗಾಗಿ ಈ ಬಾರಿ ಬಿಜೆಪಿ ಕಾರ್ಯಕರ್ತರ ಪ್ರತಿನಿಧಿಯಾಗಿ ಸ್ಪರ್ಧೆ ಮಾಡುತ್ತೇನೆ. ಸೋತರೂ ಬಿಜೆಪಿಯಲ್ಲೇ ಇರುತ್ತೇನೆ, ಗೆದ್ದರೂ ಬಿಜೆಪಿಯಲ್ಲೇ ಇರುತ್ತೇನೆ. ಇದು ಯಾವುದೇ ಬಂಡಾಯ ಅಥವಾ ಪಕ್ಷ, ವ್ಯಕ್ತಿ ವಿರುದ್ಧವಲ್ಲ. ನನಗಾಗಿ, ಜನರ ಸೇವೆಗಾಗಿ ಕೆಲಸ ಮಾಡಲು ಈ ನಿರ್ಧಾರ ಮಾಡಿದ್ದೇನೆ ಎಂದು ರಘುಪತಿ ಭಟ್ ಹೇಳಿದರು.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ