Slider


ಲೈಂಗಿಕ ದೌರ್ಜನ್ಯ ಪ್ರಕರಣ:- ದೇವೇಗೌಡರ ಮನೆಯಲ್ಲೇ ರೇವಣ್ಣ ಬಂಧನ

Udupifirst-udupinews

 


ಅಶ್ಲೀಲ ವಿಡಿಯೋ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಶಾಸಕ ಹೆಚ್ ಡಿ ರೇವಣ್ಣರನ್ನು ವಿಶೇಷ ತನಿಖಾ ದಳದ (ಎಸ್ ಐಟಿ) ಅಧಿಕಾರಿಗಳು ಇಂದು ಸಂಜೆ ವಶಕ್ಕೆ ಪಡೆದು ಬಂಧಿಸಿದ್ದಾರೆ. ಬೆಂಗಳೂರಿನ ಪದ್ಮನಾಭನಗರದಲ್ಲಿರುವ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ನಿವಾಸದಿಂದ ರೇವಣ್ಣರನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಬಳಿಕ ಅಧಿಕಾರಿಗಳು ಅವರನ್ನು ನೇರವಾಗಿ ಎಸ್‌ಐಟಿ ಕಚೇರಿಗೆ ಕರೆದುಕೊಂಡು ಹೋಗಿದ್ದಾರೆ. ಮೈಸೂರಿನ ಕೆಆರ್ ನಗರ ಠಾಣೆಯಲ್ಲಿ ದಾಖಲಾದ ಅಪಹರಣ, ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ರೇವಣ್ಣರನ್ನು ಎಸ್‌ಐಟಿ ವಶಕ್ಕೆ ಪಡೆದಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ರೇವಣ್ಣರ ನಿರೀಕ್ಷಣಾ ಜಾಮೀನು ಅರ್ಜಿ ತಿರಸ್ಕೃತಗೊಂಡಿತ್ತು. ಇದೀಗ ಇದರ ಬೆನ್ನಲ್ಲೇ ರೇವಣ್ಣ ಅವರನ್ನು ಎಸ್‌ಐಟಿ ಅಧಿಕಾರಿಗಳು ಬಂಧಿಸಿದ್ದಾರೆ








0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo