ಕಾರ್ಕಳ:- ಸಿಡಿಮದ್ದು ತಯಾರಿಕಾ ಘಟಕದಲ್ಲಿ ಆಕಸ್ಮಿಕವಾಗಿ ಸ್ಫೋಟಗೊಂಡು ಇಬ್ಬರು ಮಹಿಳೆಯರು ಗಾಯಗೊಂಡ ಘಟನೆ ಕಾರ್ಕಳದ ಕಸಬಾ ಗ್ರಾಮದ ಹಿಮ್ಮುಂಜೆ ಬಳಿಯ ಕಜೆ ಎಂಬಲ್ಲಿ ನಡೆದಿದೆ.
ಕಾರ್ಕಳ ಕಸಬಾ ಗ್ರಾಮದ ಹಿಮ್ಮುಂಜೆ ಬಳಿಯ ಕಜೆ ಎಂಬಲ್ಲಿ ಹಲವಾರು ವರ್ಷಗಳಿಂದ ಸುಡುಮದ್ದು ತಯಾರಿಕಾ ಘಟಕ ಕಾರ್ಯಾಚರಿಸುತ್ತಿದ್ದು ಎಂದಿನಂತೆ ಇಂದು ಬೆಳಗ್ಗೆ ಸುಡುಮದ್ದು ತಯಾರಿಕೆ ಸಂದರ್ಭ ಅನಿರೀಕ್ಷಿತವಾಗಿ ಸ್ಫೋಟಗೊಂಡಿದೆ.
ಸ್ಪೋಟದ ತೀವ್ರತೆಗೆ ಕಟ್ಟಡದ ಮೇಲ್ಚಾವಣಿ ಸಂಪೂರ್ಣ ಹೊತ್ತಿ ಉರಿದಿದ್ದು, ಇಬ್ಬರು ಮಹಿಳೆಯರು ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸ್ಪೋಟಕ್ಕೆ ನಿಖರ ಕಾರಣ ಇನ್ನಷ್ಟೇ ತಿಳಿಯಬೇಕಿದೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ