ಬೆಂಗಳೂರು:- ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಸಂಬಂಧ ಪ್ರಕರಣ ಬಿಜೆಪಿ ಮುಖಂಡ ದೇವರಾಜೇಗೌಡ ಅವರನ್ನು ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಹಿನ್ನೆಲೆ ಹಾಸನ ಜಿಲ್ಲೆಯ ಹೊಳೆನರಸೀಪುರ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ವಶಕ್ಕೆ ಪಡೆಯಲಾಗಿದೆ.
ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನಲ್ಲಿ ಬಿಜೆಪಿ ಮುಖಂಡ ದೇವರಾಜೇಗೌಡ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಎಸ್‌ಐಟಿಗೆ ಒಪ್ಪಿಸಲು ತಯಾರಿ ನಡೆಸಿದ್ದಾರೆ. ಹೊಳೆನರಸೀಪುರ ಪೊಲೀಸರು ನೀಡಿದ ಮಾಹಿತಿ ಮೇರೆಗೆ ಬೆಂಗಳೂರಿನಿಂದ ಬಳ್ಳಾರಿಗೆ ಹೋಗುತ್ತಿದ್ದಾಗ ಅವರನ್ನು ವಶಕ್ಕೆ ಪಡೆಯಲಾಗಿದೆ. ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಹೊಳೆನರಸೀಪುರ ಠಾಣೆಯಲ್ಲಿ ದೇವರಾಜೇಗೌಡ ವಿರುದ್ಧ ಏ.1ರಂದು ಕೇಸ್ ದಾಖಲಾಗಿತ್ತು.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ