ಉಡುಪಿ ಮೂಲದ ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಮಂಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಇಂಜಿನಿಯರಿಂಗ್ ಕಾಲೇಜಿನ ದ್ವಿತೀಯ ವರ್ಷದ ವಿದ್ಯಾರ್ಥಿಯಾಗಿರುವ ನಿತೇಶ್ ರಾವ್ (20) ಆತ್ಮಹತ್ಯೆ ಮಾಡಿಕೊಂಡ ಯುವಕ.
ಈತ ನಗರದ ಬೀಬಿ ಅಲಾಬಿ ರಸ್ತೆಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗೆ ಸೇರಿದ ಸರಕಾರಿ ಹಾಸ್ಟೆಲ್‌ನಲ್ಲಿ ಬುಧವಾರ ಬೆಳಗ್ಗೆ 10.30ರ ವೇಳೆಗೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಕೃತ್ಯಕ್ಕೆ ಕಾರಣ ಏನು ಎಂಬುದು ತಿಳಿದು ಬಂದಿಲ್ಲ. ಈತನ ತಂದೆ 5 ವರ್ಷದ ಹಿಂದೆ ನಿಧನರಾಗಿದ್ದು, ತಾಯಿ ಮತ್ತು ಸಹೋದರಿ ಇದ್ದಾರೆ. ಘಟನೆಗೆ ಸಂಬಂಧಿಸಿದಂತೆ ಬಂದರು ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ