Slider

ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ಗೆ ಜೂನ್‌ 1ವರೆಗೆ ಮಧ್ಯಂತರ ಜಾಮೀನು

Udupifirst-udupinews

 


ಡೆಲ್ಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರಿಗೆ ಜೂನ್‌ 1ವರೆಗೆ ಮಧ್ಯಂತರ ಜಾಮೀನು ನೀಡಿ ಸುಪ್ರೀಂ ಕೋರ್ಟ್‌ ಆದೇಶ ಹೊರಡಿಸಿದೆ.  ಜೂ. 2ಕ್ಕೆ ಮತ್ತೆ ಶರಣಾಗುವಂತೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ. 

ದೆಹಲಿಯ ಅಬಕಾರಿ ನೀತಿ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ (ಇಡಿ) ಬಂಧಿತರಾಗಿದ್ದ ಕೇಜ್ರಿವಾಲ್‌ ಅವರಿಗೆ ಇಂದು (ಮೇ 10) ಸುಪ್ರೀಂ ಜಾಮೀನು ಮಂಜೂರು ಮಾಡಿದೆ. 

ನ್ಯಾಯಮೂರ್ತಿ ಸಂಜೀವ್ ಖನ್ನಾ ಮತ್ತು ನ್ಯಾಯಮೂರ್ತಿ ದೀಪಂಕರ್ ದತ್ತಾ ಅವರ ಪೀಠ ಈ ತೀರ್ಪು ಪ್ರಕಟಿಸಿದೆ. ದೆಹಲಿಯಲ್ಲಿ ಮೇ 25 ರಂದು ಆರನೇ ಹಂತದ ಮತದಾನ ನಡೆಯಲಿದೆ. ಇದರ ಮಧ್ಯೆಯೇ ಅವರಿಗೆ ಜಾಮೀನು ಸಿಕ್ಕಿದೆ.

ಜೈಲಿನಿಂದ ಹೊರಬಂದ ನಂತರ ಕೇಜ್ರಿವಾಲ್ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಬಹುದು ಮತ್ತು ಪತ್ರಿಕಾಗೋಷ್ಠಿ ನಡೆಸಬಹುದು. ಮದ್ಯ ನೀತಿ ಪ್ರಕರಣದಲ್ಲಿ ಕೇಜ್ರಿವಾಲ್ ಅವರನ್ನು ಮಾರ್ಚ್ 21 ರಂದು ಇಡಿ ಬಂಧಿಸಿತ್ತು, ಏಪ್ರಿಲ್ 1 ರಿಂದ ಇಲ್ಲಿಯವರೆಗೆ ತಿಹಾರ್ ಜೈಲಿನಲ್ಲಿ ಇರಿಸಲಾಗಿತ್ತು.










0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo