Slider

ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಆರೋಗ್ಯ ಸ್ಥಿತಿ ಗಂಭೀರ

Udupinews udupifirst smkrishnahealthupdate

 


ಮಾಜಿ ಸಿಎಂ ಎಸ್ಎಂ ಕೃಷ್ಣ ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ವೆಂಟಿಲೇಟರ್ ಮೂಲಕ ಐಸಿಯುನಲ್ಲಿ ಚಿಕಿತ್ಸೆ ಮುಂದುವರಿದಿದೆ.

ಡಾ.ಸತ್ಯನಾರಾಯಣ ಹಾಗೂ ಡಾ.ಸುನೀಲ್ ಕಾರಂತ ನೇತೃತ್ವದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ಎಸ್‌ಎಂ ಕೃಷ್ಣ ಆರೋಗ್ಯ ಗಂಭೀರವಾಗಿದ್ದು, ಚಿಕಿತ್ಸೆ ಮುಂದುವರೆದಿದೆ ಎಂದು ಆಸ್ಪತ್ರೆ ಮೂಲಗಳು ಹೇಳಿದೆ.

ಇನ್ನು ಅನಾರೋಗ್ಯದ ಹಿನ್ನೆಲೆಯಲ್ಲಿ ಎಸ್‌ಎಂ ಕೃಷ್ಣ ಅವರು ಏಪ್ರಿಲ್ 22ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಜ್ವರ, ಕೆಮ್ಮು ಕಾಣಿಸಿಕೊಂಡ ಹಿನ್ನೆಲೆ ಬೆಂಗಳೂರಿನ ವಿಠಲ್ ಮಲ್ಯ ರಸ್ತೆಯ ವೈದೇಹಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಂಡು ಡಿಸ್ಚಾರ್ಜ್ ಆಗಿದ್ದರು. ಇದಾದ ಬಳಿಕ ಏಪ್ರಿಲ್ 29 ರಂದು ಎಸ್ಎಂ ಕೃಷ್ಣ ಅವರ ಆರೋಗ್ಯದಲ್ಲಿ ಏರುಪೇರಾಗಿ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು.








0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo