ಲೈಂಗಿಕ ಕಿರುಕುಳ ನೀಡಿರುವ ಬಗ್ಗೆ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ವಿರುದ್ಧ ಯಾವೊಬ್ಬ ಮಹಿಳೆಯೂ ದೂರು ನೀಡಿಲ್ಲ ಎಂದು ರಾಷ್ಟ್ರೀಯ ಮಹಿಳಾ ಆಯೋಗ ತಿಳಿಸಿದೆ.
ಓರ್ವ ಮಹಿಳೆ ಬಂದು ನಕಲಿ ದೂರು ನೀಡುವಂತೆ ಒತ್ತಾಯಿಸಲಾಗುತ್ತಿದೆ ಎಂದು ಹೇಳಿಕೊಂಡಿದ್ದರು. ಇನ್ನೂ ಈಗಾಗಲೇ ಪ್ರಜ್ವಲ್ ರೇವಣ್ಣ ವಿರುದ್ಧ ಎರಡು ಲೈಂಗಿಕ ದೌರ್ಜನ್ಯದ ದೂರು ಹಾಗೂ ಅಪಹರಣದ ಒಂದು ದೂರು ದಾಖಲಾಗಿವೆ ಎಂದು ಸಂಬಂಧಪಟ್ಟ ಅಧಿಕಾರಿಗಳು ಕ್ರಮ ತೆಗೆದುಕೊಂಡ ವರದಿಯಲ್ಲಿ ತಿಳಿಸಿದ್ದಾರೆ.
ಆದರೆ ನಮಗೆ ಲೈಂಗಿಕ ಕಿರುಕುಳ ನೀಡಿರುವ ಬಗ್ಗೆ ಯಾರು ದೂರನ್ನು ನೀಡಲು ಬಂದಿಲ್ಲ ಎಂದು ಆಯೋಗ ತಿಳಿಸಿದೆ. ಅದಲ್ಲದೆ ಮಹಿಳೆಯೊಬ್ಬರಿಗೆ ಒತ್ತಾಯ ಪೂರ್ವಕವಾಗಿ ಪ್ರಜ್ವಲ್ ರೇವಣ್ಣ ವಿರುದ್ಧ ದೂರು ನೀಡುವಂತೆ ಫೋನ್ ಮಾಡಿ ಕರೆ ಮಾಡುತ್ತಿರುವ ಬಗ್ಗೆ ಆಯೋಗ ಹೇಳಿದೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ