ಮುಂದಿನ 48 ಗಂಟೆಗಳಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಗಂಟೆಗೆ 40-50 ಕಿ.ಮೀ. ವೇಗದಲ್ಲಿ ಬಿರುಗಾಳಿ ಬೀಸಲಿದ್ದು, ಗುಡುಗು ಸಹಿತ ಭಾರಿ ಮಳೆಯಾಗಲಿದೆ. ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೋಲಾರ, ರಾಮನಗರ, ಶಿವಮೊಗ್ಗ ಜಿಲ್ಲೆಗಳಲ್ಲಿಯೂ ಇದೇ ವೇಗದಲ್ಲಿ ಗಾಳಿ ಬೀಸಲಿದ್ದು, ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ