ಕುಂದಾಪುರ : ಕುಂದಾಪುರ ಸಮೀಪದ ಹೆಮ್ಮಾಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸರಣಿ ಅಪಘಾತ ಸಂಭವಿಸಿದ್ದು, ಐವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಲಾರಿಯೊಂದು ಕಾರಿನ ಹಿಂಭಾಗಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರು ಡಿವೈಡರ್ ದಾಟಿ ರಸ್ತೆಯ ಇನ್ನೊಂದು ಬದಿಯಲ್ಲಿ ಹೋಗುತ್ತಿದ್ದ ಕಾರಿಗೆ ಡಿಕ್ಕಿಯಾಗಿ ಸರಣಿ ಅಪಘಾತವಾಗಿದೆ. ಇದರಿಂದ ಕಾರಿನಲ್ಲಿದ್ದ ಪದ್ಮನಿ, ವಿಜಯಾ, ವಿಕ್ಷಾ, ಜಯಷ್ಣವಿ, ಷಣ್ಮುಖ, ವಿಜೀಷಾ ಅವರಿಗೆ ಗಾಯಗಳಾಗಿವೆ.
ಕಾರು ಚಾಲಕ ವಿಪಿನ್ ಲಾಲ್ ಹಾಗೂ ವಿಜಿತ್‌ಗೆ ಯಾವುದೇ ಗಾಯ ಆಗಿಲ್ಲ. ಗಾಯಾಳುಗಳನ್ನು ಚಿಕಿತ್ಸೆಗೆ ಕುಂದಾಪುರ ಖಾಸಗಿ ಆಸ್ಪತ್ರೆಗೆ ತಂದು ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ