Slider

ಮಾಜಿ ಶಾಸಕ ವಸಂತ್ ಬಂಗೇರ ನಿಧನ

Udupifirst-udupinews

 

ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ಕಾಂಗ್ರೆಸ್ ಮುಖಂಡ, ಬೆಳ್ತಂಗಡಿಯ ಐದು ಬಾರಿಯ ಶಾಸಕ ಕೆ.ವಸಂತ ಬಂಗೇರ (79) ಮೇ 8ರಂದು ಸಂಜೆ 4 ಗಂಟೆಯ ಸುಮಾರಿಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.

ಕೇದೆ ಸುಬ್ಬ ಪೂಜಾರಿ – ದೇವಕಿ ದಂಪತಿಯ ಪ್ರಥಮ ಪುತ್ರನಾಗಿ 1946ರ ಜನವರಿ 15ರಂದು ಜನಿಸಿದ್ದ ಅವರ ಆರೋಗ್ಯ ಇತ್ತೀಚೆಗೆ ತೀವ್ರವಾಗಿ ಹದಗೆಟ್ಟಿದ್ದು, ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.

ಇದೀಗ ಅವರು ಕೊನೆಯುಸಿರೆಳೆದಿದ್ದು, ಮೇ 9ರಂದು ಮುಂಜಾನೆ ಪಾರ್ಥಿವ ಶರೀರ ಬೆಳ್ತಂಗಡಿಗೆ ಆಗಮಿಸುವ ನಿರೀಕ್ಷೆ ಇದೆ. ನಂತರ ಸಾರ್ವಜನಿಕರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.









0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo