Slider

ಮೋದಿ 3.0ಗೆ ಕ್ಷಣಗಣನೆ; ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ


 NDA ಸಂಸದೀಯ ನಾಯಕರಾಗಿ ಆಯ್ಕೆಯಾಗಿರುವ ನರೇಂದ್ರ ಮೋದಿ ಇಂದು ಸಂಜೆ ಸತತ ಮೂರನೇ ಅವಧಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಇಂದು ಸಂಜೆ 7.15 ಕ್ಕೆ ರಾಷ್ಟ್ರಪತಿ ಭವನದಲ್ಲಿ ನಡೆಯುವ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನರೇಂದ್ರ ಮೋದಿ ಮತ್ತು ಅವರ ಸಂಪುಟದ ಕೆಲವು ಸಚಿವರಿಗೆ ಪ್ರಮಾಣ ವಚನ ಬೋಧಿಸಲಿದ್ದಾರೆ.

ಸರಿಯಾಗಿ 7:15 PM ಕ್ಕೆ ನರೇಂದ್ರ ಮೋದಿಯವರು ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ರಾಷ್ಟ್ರಪತಿ ಭವನ ಈ ಮಹತ್ತರ ಕಾರ್ಯಕ್ರಮಕ್ಕೆ ವೇದಿಕೆಯಾಗುತ್ತಿದೆ. ಸಾರ್ಕ್ ರಾಷ್ಟ್ರಗಳ ಮುಖ್ಯಸ್ಥರು, ಗಣ್ಯರು, ಪ್ರತಿನಿಧಿಗಳು ಮೋದಿ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಆಗಮಿಸುತ್ತಿದ್ದಾರೆ.. 

ಮೋದಿ ಪ್ರಮಾಣ ಬೆನ್ನಲ್ಲೇ 30 ಮಂದಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆಯಿದೆ. ಒಟ್ಟು ಎರಡು ಹಂತಗಳಲ್ಲಿ ಸಂಪುಟ ರಚನೆಯಾಗುವ ಸಾಧ್ಯತೆಯಿದ್ದು ಪ್ರಮಾಣವಚನ ಸಮಾರಂಭಕ್ಕಾಗಿ ಈಗಾಗಲೇ ಎಲ್ಲಾ ಸಿದ್ದತೆಗಳು ನಡೆದಿವೆ. ಪೂರ್ಣ ಪ್ರಮಾಣದ ಮಂತ್ರಿಮಂಡಲದ ಬಲವು 78 ಮತ್ತು 81 ರ ನಡುವೆ ಇರಬಹುದೆಂದು ನಿರೀಕ್ಷಿಸಲಾಗಿದೆ.












0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo