ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ಪ್ರಧಾನಿಯಾಗಿ ನರೇಂದ್ರ ಮೋದಿ ಸತತ ಮೂರನೇ ಬಾರಿಗೆ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರತಿಜ್ಞಾವಿಧಿ ಬೋಧಿಸಿದ್ದಾರೆ.
ಜವಾಹರಲಾಲ್ ನೆಹರು ನಂತರ ಸತತ ಮೂರನೇ ಬಾರಿಗೆ ಪ್ರಧಾನಿಯಾದ ಹೆಗ್ಗಳಿಕೆಗೆ ಮೋದಿ ಪಾತ್ರರಾಗಿದ್ದಾರೆ. ನೆಹರು ಮೊದಲ ಬಾರಿಗೆ ನೇಮಕವಾಗಿದ್ದು, ನಂತರ ಎರಡು ಬಾರಿ ಚುನಾಯಿತರಾಗಿದ್ದರು. ಮೋದಿ ಸತತ ಮೂರು ಬಾರಿಗೆ ಚುನಾಯಿತರಾಗಿ ಪ್ರಧಾನಿ ಹುದ್ದೆಗೇರಿದ್ದಾರೆ.
ರಾಷ್ಟ್ರಪತಿಗಳ ಅನುಮೋದನೆ ಪಡೆದು ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ಆರಂಭಿಸಲಾಯಿತು. ಆರಂಭದಲ್ಲಿ ನರೇಂದ್ರ ಮೋದಿಯವರನ್ನು ಕರೆಯಲಾಯಿತು. ಮೋದಿ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಬಳಿಕ ರಾಜನಾಥ್ ಸಿಂಗ್ ಗೆ ಪ್ರಮಾಣ ವಚನ ಬೋಧಿಸಲಾಯಿತು.
ಬಳಿಕ ಕ್ರಮ ಪ್ರಕಾರವಾಗಿ ಅಮಿತ್ ಶಾ, ನಿತಿನ್ ಗಡ್ಕರಿ, ಜೆಪಿ ನಡ್ಡಾ, ಶಿವರಾಜ್ ಸಿಂಗ್ ಚೌಹಾಣ್, ನಿರ್ಮಲಾ ಸೀತಾರಾಮನ್, ಎಸ್. ಜೈಶಂಕರ್, ಮನೋಹರ್ ಲಾಲ್, ಎಚ್ ಡಿ ಕುಮಾರಸ್ವಾಮಿ ಸೇರಿದಂತೆ ಒಬ್ಬರಾದ ಮೇಲೊಬ್ಬರಂತೆ ಪ್ರಮಾಣ ವಚನ ಸ್ವೀಕಾರ ಮಾಢಿದ್ದಾರೆ.
ಕರ್ನಾಟಕದ ನಾಲ್ವರಿಗೆ ಒಲಿದ ಕೇಂದ್ರ ಮಂತ್ರಿ ಸ್ಥಾನ
ಇನ್ನು ಮೋದಿ 3.0 ಸರ್ಕಾರದಲ್ಲಿ ಕರ್ನಾಟಕಕ್ಕೂ ಹೆಚ್ಚಿನ ಪ್ರಾತಿನಿಧ್ಯ ನೀಡಲಾಗಿದ್ದು, ಒಟ್ಟು 4 ಕೇಂದ್ರ ಸಚಿವ ಸ್ಥಾನ ಒಲಿದು ಬಂದಿದೆ. 2 ಕ್ಯಾಬಿನೆಟ್ ದರ್ಜೆಯ ಸ್ಥಾನಮಾನ ನೀಡಲಾಗಿದ್ದು ಇನ್ನೆರಡು ರಾಜ್ಯ ದರ್ಜೆಯ ಸಚಿವ ಸ್ಥಾನ ನೀಡಲಾಗಿದೆ. ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಇದೇ ಮೊದಲ ಬಾರಿಗೆ ಕೇಂದ್ರದಲ್ಲಿ ಸಚಿವರಾಗಿದ್ದರು, ಕ್ಯಾಬಿನೆಟ್ ದರ್ಜೆಯ ಸಚಿವ ಸ್ಥಾನ ನೀಡಲಾಗಿದೆ ಇದರ ಜೊತೆಗೆ ಪ್ರಹ್ಲಾದ್ ಜೋಷಿ ಅವರು ಎರಡನೇ ಬಾರಿಗೆ ಕೇಂದ್ರ ಸಚಿವರಾಗಿದ್ದಾರೆ. ಇನ್ನು ಬಿಜೆಪಿ ಹಿರಿಯ ನಾಯಕ ವಿ.ಸೋಮಣ್ಣ ಹಾಗೂ ಸಂಸದೆ ಶೋಭಾ ಕರಂದ್ಲಾಜೆ ಅವರಿಗೆ ರಾಜ್ಯ ದರ್ಜೆಯ ಸಚಿವ ಸ್ಥಾನ ನೀಡಲಾಗಿದೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ