ಮೋದಿ ಮೂರನೇ ಬಾರಿಗೆ ಪ್ರಧಾನಿ ಪಟ್ಟ ಅಲಂಕರಿಸಲು ಕ್ಷಣಗಣನೆ ಶುರುವಾಗಿದೆ. ಇಂದು ಸಂಜೆ 7.15ಕ್ಕೆ ರಾಷ್ಟ್ರಪತಿ ಭವನದಲ್ಲಿ ಮೋದಿ ಮೂರನೇಯ ಬಾರಿಗೆ ಪ್ರಧಾನಿ ಹುದ್ದೆಯನ್ನು ಅಲಂಕರಿಸಲಿದ್ದಾರೆ. ಇನ್ನು, ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಅವರಿಗೂ ಸಚಿವ ಸ್ಥಾನ ಒಲಿದು ಬಂದಿದೆ.
ಈ ಕುರಿತು ಪ್ರಧಾನಿ ಕಾರ್ಯಾಲಯದಿಂದ ಕರೆ ಮಾಡಿ ಸಚಿವ ಸ್ಥಾನದ ನೀಡೋದಾಗಿ ಹೇಳಲಾಗಿದೆ. ತಮಿಳುನಾಡಿನಲ್ಲಿ ಬಿಜೆಪಿ ಪಕ್ಷವನ್ನು ಶತಾಗತಾಯ ಬೆಳೆಸಲು ಅಣ್ಣಾಮಲೈ ಭಾರಿ ಶ್ರಮ ಪಟ್ಟಿದ್ದಾರೆ. ಈ ಬಾರಿ 1-3 ಸ್ಥಾನಗಳು ಬಿಜೆಪಿ ತಮಿಳುನಾಡಿನಲ್ಲಿ ಸಿಗಲಿವೆ ಎಂದು ನಿರೀಕ್ಷಿಸಲಾಗಿತ್ತು. ಆದರೆ, ಬಿಜೆಪಿ ನಿರೀಕ್ಷೆ ಸುಳ್ಳಾಗಿದೆ. ಆದರೂ ಕೂಡಾ ಅಣ್ಣಾಮಲೈ ಶ್ರಮವನ್ನು ಮೆಚ್ಚಿ ಕೇಂದ್ರ ಮಂತ್ರಿ ಸ್ಥಾನ ನೀಡಲು ಎನ್‌ಡಿಎ ಮೈತ್ರಿಕೂಟ ಮುಂದಾಗಿದೆ. ಈ ಕುರಿತು ಅಣ್ಣಾಮಲೈ ಅವರಿಗೆ ನವದೆಹಲಿ ಪ್ರಧಾನಿ ಕಾರ್ಯಾಲಯದಿಂದ ಕರೆ ಮಾಡಿ ತಿಳಿಸಲಾಗಿದೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ