ಲೋಕಸಭಾ ಚುನಾವಣೆ ಫಲಿತಾಂಶದ ಬಳಿಕ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ಜೆಪಿ ನಡ್ಡಾ ರಾಜೀನಾಮೆ ನೀಡಿದ್ದಾರೆ. ಜೆಪಿ ನಡ್ಡಾ ಪ್ರಧಾನಿ ನರೇಂದ್ರ ಮೋದಿ ಅವರ ಸಂಪುಟದಲ್ಲಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆಯಿರುವುದರಿಂದ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ ಎಂದು ವರದಿಯಾಗಿದೆ. ಅವರ ಅಧಿಕಾರಾವಧಿ ಇದೇ ತಿಂಗಳು ಮುಕ್ತಾಯಗೊಳ್ಳಲಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ಜೆಪಿ ನಡ್ಡಾ ರಾಜೀನಾಮೆ ನೀಡಿದ್ದು, ಮುಂದೆ ಅವರ ಸ್ಥಾನಕ್ಕೆ ಯಾರನ್ನು ಆಯ್ಕೆ ಮಾಡಲಾಗುತ್ತದೆ ಎಂಬುವುದನ್ನು ಕಾದು ನೋಡಬೇಕಿದೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ