ಉಡುಪಿ: ಮುಡಾ ಹಗರಣದ ತನಿಖೆ ಪಾರದರ್ಶಕವಾಗಿ ನಡೆಯಬೇಕಾದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು' ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ಸುದ್ದಿಗಾರರ ಜೊತೆ ಮಾತನಾಡಿದ ಅವರು, 'ಅಂದು ಯಡಿಯೂರಪ್ಪನವರ ಪ್ರಕರಣದಲ್ಲಿ ಯಾವ ಮಾನದಂಡವನ್ನು ಅನುಸರಿಸಬೇಕೆಂದು ಸಿದ್ದರಾಮಯ್ಯ ಅವರು ಹೇಳಿದ್ದಾರೋ, ಅದೇ ಮಾನದಂಡವನ್ನು ಈ ಪ್ರಕರಣದಲ್ಲೂ ಅನುಸರಿಸಬೇಕು.
ಅವರು ತಮ್ಮ ಹೇಳಿಕೆಗೆ ಬದ್ಧರಾಗಬೇಕು. ಪಕ್ಷದ ಅಧ್ಯಕ್ಷರ ಜೊತೆ ನಿಂತು ನಾವು ಹೋರಾಟ ಮುಂದುವರಿಸಲಿದ್ದೇವೆ' ಎಂದರು.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ