ಕಾಸರಗೋಡು : ಕೆರೆಗೆ ಬಿದ್ದು ಮೂರು ವರ್ಷದ ಬಾಲಕ ಮೃತಪಟ್ಟ ಘಟನೆ ಬೆದ್ರಡ್ಕ ಕಂಬಾರ್ ನಲ್ಲಿ ಭಾನುವಾರ ಸಂಜೆ ನಡೆದಿದೆ. ಮೃತಪಟ್ಟ ಬಾಲಕನನ್ನು ಕಂಬಾರಿನ ನೌಶಾದ್ ರವರ ಪುತ್ರ ಮುಹಮ್ಮದ್ ಎಂದು ಗುರುತಿಸಲಾಗಿದೆ.
ಸೋಹಾನ್ ಹಬೀಬ್ ಮನೆಯಂಗಳದಲ್ಲಿ ಆಟವಾಡುತ್ತಿದ್ದ ಮುಹಮ್ಮದ್ ಸೋಹಾನ್ ಹಬೀಬ್ ದಿಢೀರ್ ನಾಪತ್ತೆಯಾಗಿದ್ದಾನೆ.
ಈ ವೇಳೆ ಸಂಬಂಧಿಕರು ಮನೆಯೊಳಗೆ ಹಾಗೂ ಪರಿಸರದ ಮನೆಗಳಲ್ಲಿ ಆತನಿಗಾಗಿ ಹುಡುಕಾಟ ನಡೆಸಿದ್ದಾರೆ. ಬಾಲಕ ಪತ್ತೆಯಾಗದ ಹಿನ್ನಲೆಯಲ್ಲಿ ಸಂಬಂಧಿಕರು, ಶೋಧ ನಡೆಸಿದಾಗ ಮನೆ ಸಮೀಪದ 200 ಮೀಟರ್ ದೂರದ ಕೆರೆಯಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ ಎನ್ನಲಾಗಿದೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ