ಮುಡಾ ಪ್ರಕರಣ ಸಂಬಂಧ ತಮ್ಮ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ನೀಡಿರುವ ಪೂರ್ವಾನುಮತಿ ರದ್ದುಪಡಿಸಲು ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿರುವ ತಕರಾರು ಅರ್ಜಿ ಕುರಿತ ತೀರ್ಪು ಇಂದು ಮಧ್ಯಾಹ್ನ 12 ಗಂಟೆಗೆ ಪ್ರಕಟವಾಗಲಿದೆ.
ಎಲ್ಲರ ಚಿತ್ತ ಹೈಕೋರ್ಟ್ ನತ್ತ ನೆಟ್ಟಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ರಿಲೀಫ್ ಸಿಗುತ್ತಾ? ಟೆನ್ಷನ್ ಇನ್ನೂ ಹೆಚ್ಚಾಗುತ್ತಾ? ರಾಜೀನಾಮೆ ನೀಡುತ್ತಾರಾ ಅಥವಾ ಕಾನೂನು ಹೋರಾಟ ಮುಂದುವರೆಸುತ್ತಾರಾ ಎನ್ನುವ ಚರ್ಚೆ ರಾಜಕೀಯ ವಲಯದಲ್ಲಿ ಜೋರಾಗಿದೆ.
ರಾಜಕೀಯ ವಾಗ್ವಾದ, ಪ್ರತಿಭಟನೆ, ಹಲವು ರೀತಿಯ ಲೆಕ್ಕಾಚಾರಕ್ಕೆ ಕಾರಣವಾಗಿದ್ದ ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮಧ್ಯಾಹ್ನ ತೀರ್ಪು ಪ್ರಕಟವಾಗಲಿದೆ. ಮುಖ್ಯಮಂತ್ರಿಗಳ ಅರ್ಜಿ ಕುರಿತಾಗಿ ಘಟಾನುಘಟಿ ವಕೀಲರು ಸುದೀರ್ಘ ವಾದ -ಪ್ರತಿವಾದ ಮಂಡಿಸಿದ್ದಾರೆ.
ವಾದ ಪ್ರತಿವಾದ ಆಲಿಸಿ ಕಾಯ್ದಿರಿಸಿರುವ ತೀರ್ಪನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಏಕ ಸದಸ್ಯ ಪೀಠ ಮಂಗಳವಾರ ಮಧ್ಯಾಹ್ನ 12 ಗಂಟೆಗೆ ಪ್ರಕಟಿಸಲಿದೆ. ಮುಖ್ಯಮಂತ್ರಿಗಳಿಗೆ ಕಂಟಕವಾಗಿರುವ ಪ್ರಾಸಿಕ್ಯೂಷನ್ ಭವಿಷ್ಯ ಇಂದು ನಿರ್ಧಾರವಾಗಲಿದೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ