ಕುಂದಾಪುರ:- ಎಂ.ಬಿ.ಬಿ.ಎಸ್ ಮುಗಿಸಿ ಎಂ.ಎಸ್ ಮಾಡಲು ಸಿದ್ಧತೆ ನಡೆಸುತ್ತಿದ್ದ ಯುವಕ ಬುಧವಾರ ರಾತ್ರಿ ಕೋಟೇಶ್ವರ ಕೋಟಿಲಿಂಗೇಶ್ವರ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಗೌರೀಶ್ ಗಾಣಿಗ (28) ಎಂದು ಗುರುತಿಸಲಾಗಿದೆ.
ಬುಧವಾರ ಸಂಜೆ ಮನೆಯಿಂದ ಹೋದಾತ ನಾಪತ್ತೆಯಾಗಿದ್ದ. ಬಳಿಕ ಸ್ಥಳೀಯರು ಹುಡುಕಾಟ ನಡೆಸಿದ್ದು, ಪತ್ತೆಯಾಗಿರಲಿಲ್ಲ. ಬಳಿಕ ಪೊಲೀಸ್ ಠಾಣೆಗೆ ದೂರು ದಾಖಲಿಸಲು ಹೋದಾಗ ಗೌರೀಶ್ ಮೊಬೈಲ್ ಲೊಕೇಶನ್ ಕೋಟೇಶ್ವರ ಕೆರೆ ಬಳಿಯಲ್ಲಿ ತೋರಿಸುತ್ತಿತ್ತು ಎನ್ನಲಾಗಿದೆ. ಅಲ್ಲಿ ಹೋದಾಗ ಆತನ ಬೈಕ್ ದೇವಸ್ಥಾನದ ಮುಂಭಾಗದಲ್ಲಿ ನಿಲ್ಲಿಸಲಾಗಿತ್ತು. ಮೊಬೈಲ್ ಫೋನ್ ಮತ್ತು ಚಪ್ಪಲಿಯನ್ನು ಕೆರೆ ಸಮೀಪ ಒಂದು ಮೂಲೆಯಲ್ಲಿ ಕವುಚಿ ಇಡಲಾಗಿತ್ತು ಎಂದು ತಿಳಿದು ಬಂದಿದೆ. ಘಟನೆಗೆ ಸ್ಪಷ್ಟ ಕಾರಣ ತಿಳಿದು ಬಂದಿಲ್ಲ. ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ